ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮಕ್ಕಳಿಗೆ ಲ್ಯಾಪಟಾಪ್ ನೀಡಲು ನಿರ್ಧಾರ: ಯತ್ನಾಳ

Decision to give laptops to children who stand first in SSLC exam: Yatnala

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮಕ್ಕಳಿಗೆ ಲ್ಯಾಪಟಾಪ್ ನೀಡಲು ನಿರ್ಧಾರ: ಯತ್ನಾಳ  

ವಿಜಯಪುರ,18 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಗೆ ಹಾಗೂ ಎಲ್ಲ ತಾಲ್ಲೂಕುಗಳಿಗೆ ಪ್ರಥಮ ಸ್ಥಾನ ಪಡೆಯುವ ಮಕ್ಕಳಿಗೆ ಲ್ಯಾಪಟಾಪ್ ಬಹುಮಾನವಾಗಿ ನೀಡುವ ನಿರ್ಧಾರ ಪ್ರಕಟಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಿರ್ಧಾರ ಸ್ವಾಗತಾರ್ಹ ಎಂದು ವಿಜಯಪುರ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ್ ಬಿರಾದಾರ ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಮೂಲಕ ಶೈಕ್ಷಣಿಕ ವಲಯದಲ್ಲಿ ಮಕ್ಕಳ ಕಾಳಜಿಯ ಕ್ರಾಂತಿಯನ್ನೇ ಮಾಡಿರುವ ನಗರ ಶಾಸಕರು ಈಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಲ್ಯಾಪ್‌ಟಾಪ್ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ಮುಂಬರುವ ಉನ್ನತ ಅಧ್ಯಯನಕ್ಕೆ ಲ್ಯಾಪಟಾಪ್ ಅನುಕೂಲವಾಗಲಿದ್ದು, ವಿದ್ಯಾರ್ಥಿಗಳಿಗೂ ಸಹ ಒಂದು ಹೊಸ ಹುಮ್ಮಸ್ಸು ಪ್ರೋತ್ಸಾಹ ದೊರಕಿದಂತಾಗಿದೆ. 

 ಶೈಕ್ಷಣಿಕ ವಿಷಯವಾಗಿ ಅನೇಕ ಮಹತ್ವದ ಯೋಜನೆಗಳನ್ನು ಪ್ರಕಟಿಸಿ ಅನುಷ್ಠಾನಗೊಳಿಸುತ್ತಿರುವುದು ಸಮಸ್ತ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದಕ್ಕೂ ಸಹ ಸಂತೋಷ ತರಿಸಿದೆ. ಈ ರೀತಿಯ ಪ್ರೋತ್ಸಾಹಕರ ಬಹುಮಾನ ವಿದ್ಯಾರ್ಥಿಗಳಿಗೆ ದೊರಕುತ್ತಿದ್ದರೆ ವಿದ್ಯಾರ್ಥಿಗಳು ಉತ್ಸಾಹದಿಂದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ, ನಗರ ಶಾಸಕರ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಬಿರಾದಾರ ಹೇಳಿದ್ದಾರೆ.