ಕತ್ತಲೆಯಿಂದ ಬೆಳಕಿನಡೆಗೆ ಸಾಗುವುದೇ ದೀಪೋತ್ಸವ: ಜಡಿಮಠದ ಶ್ರೀ
Deepotsava is the journey from darkness to light: Jadimath's Sri
ದೇವರಹಿಪ್ಪರಗಿ 14: ಕಾರ್ತಿಕೋತ್ಸವ ಮಾಸ ಅತ್ಯಂತ ಪವಿತ್ರವಾಗಿದ್ದು, ದೀಪೋತ್ಸವದ ಮೂಲಕ ದೇವರನ್ನು ಸ್ಮರಿಸುತ್ತ ಕತ್ತಲೆಯಿಂದ ಬೆಳಕಿನಡೆಗೆ ಸಾಗುವುದಾಗಿದೆ ಎಂದು ಜಡೆ ಮಠದ ಶ್ರೀ ಷ.ಬ್ರ ಜಡಿಸಿದ್ದೇಶ್ವರ ಶಿವಾಚಾರ್ಯರು ನುಡಿದರು.
ಪಟ್ಟಣದ ಜಡೆಮಠದ ಆವರಣದಲ್ಲಿ ಗುರುವಾರ ಕಾರ್ತಿಕ ಮಾಸದ ನಿಮಿತ್ತ ಹಮ್ಮಿಕೊಂಡಿದ್ದ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ತಿಕ ಮಾಸ ಅತ್ಯಂತ ಶ್ರೇಷ್ಠವಾಗಿದ್ದು, ಈ ಸಂದರ್ಭದಲ್ಲಿ ದೀಪಾರಾಧನೆ ಮಾಡಿದರೆ ಐಶ್ವರ್ಯ, ಸಂಪತ್ತು, ಆರೋಗ್ಯ ಭಾಗ್ಯ ಪ್ರಾಪ್ತಿಯಾಗುತ್ತದೆ. ಈ ಕಾರಣಕ್ಕೆ ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ ಎಂದರು.ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ದೀಪ ಬೆಳಗಿಸಿದರು.ನಂತರ ಪಟ್ಟಣದ ಜಡೆಮಠದ ಶ್ರೀ ಷ.ಬ್ರ.ಜಡಿ ಸಿದ್ದೇಶ್ವರ ಶಿವಾಚಾರ್ಯರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರಿಗೆ ಸನ್ಮಾನಿಸಿ ಆಶೀರ್ವದಿಸಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪಟ್ಟಣಶೆಟ್ಟಿಗೆ ಸನ್ಮಾನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರಿಗೆ ಜಡಿ ಮಠದ ಶ್ರೀ ಷ.ಬ್ರ ಜಡಿಸಿದ್ದೇಶ್ವರ ಶಿವಾಚಾರ್ಯರು ಸನ್ಮಾನಿಸಿ, ಆಶೀರ್ವದಿಸಿದರು.
ನಂತರ ಮಾತನಾಡಿ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರು ದೇವರಹಿಪ್ಪರಗಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾಲೂಕಿನ ಸರ್ವತೋಮುಖ ಪ್ರಗತಿಯಲ್ಲಿ ಅವರ ವರದಿಗಳು ಬಹುಮುಖ್ಯ ಪಾತ್ರ ವಹಿಸಿವೆ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಜನರ ಸಮಸ್ಯೆಗಳಿಗೆ ಸದಾ ತಮ್ಮ ವರದಿಗಳಲ್ಲಿ ಬೆಳಕು ನೀಡುವ ಮೂಲಕ ಜನಮಾನಸದಲ್ಲಿದ್ದಾರೆ.ಅವರಿಗೆ ಇನ್ನಷ್ಟೂ ಪ್ರಶಸ್ತಿಗಳು ಅರಸಿ ಬರಲಿ ಎಂದು ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರಾದ ಚೆನ್ನವೀರ್ಪ ಕುದರಿ, ಪಂಚಾಕ್ಷರಿ ಮಿಂಚನಾಳ, ಶಾಂತಯ್ಯ ಜಡಿಮಠ, ಸೋಮು ಹಿರೇಮಠ, ಶಂಕರಗೌಡ ಪಾಟೀಲ, ಬಸಯ್ಯ ಮಠಪತಿ, ಶರಣಪ್ಪ ಉಪಲಾಯಿ, ಪೀರ್ಪ ತಾಂಬೆ, ಆನಂದ ಜಡಿಮಠ, ಸಿದ್ದಪ್ಪ ಆನಂದಿ, ಸುಭಾಷ ತಾಂಬೆ, ಶರಣಪ್ಪ ಹಳ್ಳಿ, ಮಹೇಶ ಅಂಬಲಗಿ ಸೇರಿದಂತೆ ಮಹಿಳೆಯರ ಹಾಗೂ ಮಕ್ಕಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 