ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ವಿಳಂಬ: ಶೀಘ್ರವಾಗಿ ವಿತರಿಸುವಂತೆ ಎಸ್‌ಎಫ್‌ಐ ಆಗ್ರಹ

Delay in distribution of graduate students' mark sheets: SFI demands speedy distribution

ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ವಿಳಂಬ: ಶೀಘ್ರವಾಗಿ ವಿತರಿಸುವಂತೆ ಎಸ್‌ಎಫ್‌ಐ ಆಗ್ರಹ

ಧಾರವಾಡ 30: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಲೋಪ ದೋಷ ಸರಿಪಡಿಸಿ ಶೀಘ್ರವಾಗಿ ವಿತರಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಧಾರವಾಡ ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯಕರ್ತರು ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಎದುರು ಕುಲಸಚಿವರಾದ ಕೆ.ಚೆನ್ನಪ್ಪ ಅವರ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್  ಮಾತನಾಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ  (ಎನ್‌ಇಪಿ 2020) ಜಾರಿಯಾದ  ನಂತರ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸುಮಾರು 51 ಲಕ್ಷಕ್ಕೂ ಹೇಳು ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ ಓಇಕ ರದ್ದುಗೊಳಿಸಿ  ಖಇಕ ಜಾರಿಗೋಳಿಸಿದೆ ಆದರೆ ಖಇಕ ವಿದ್ಯಾರ್ಥಿಗಳಿಗೂ ಸಹ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹತ್ತಿರ ಹೋಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.  

ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್ ( ಆರ ಐಠಞಜಡಿ ) ನಲ್ಲಿ   ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ ಆದರೆ ಡಿಜಿ ಲಾಕರ್  ನಲ್ಲಿಯೂ ಸಹ ಅಂಕಪಟ್ಟಿ ಸಿಗುತ್ತಿಲ್ಲ ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಇದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಾರೆ.  ಈ ಸಮಸ್ಯೆ ಗಅಅಒಖ ಜಾರಿಗೆ ಬಂದ ದಿನದಿಂದ ಸಮಸ್ಯೆ ಉಂಟಾಗುತ್ತಿದೆ  ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ಮತ್ತು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಸಹ ತೊಂದರೆ ಉಂಟಾಗುತ್ತಿದೆ ಎಂದರು.ರಾಜ್ಯ ಉಪಾಧ್ಯಕ್ಷ ಗಣೇಶ ರಾಠೋಡ್ ಮಾತನಾಡಿ, ಓಇಕ ಯಲ್ಲಿ  ಆನ್ಲೈನ್ ಅಂಕಪಟ್ಟಿ ಜೊತೆಗೆ ಮುದ್ರಿತಾ ಅಂಕಪಟ್ಟಿ ನೀಡಬೇಕೆಂದು ಇದೆ. ಅದಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ರಾಜ್ಯಪಾಲರು 22-12-2022 ರಂದು ಎಲ್ಲಾ ವಿಶ್ವವಿದ್ಯಾನಿಲಯಗಳು ಮುದ್ರಿತಾ ಅಂಕಪಟ್ಟಿ ವಿತರಿಸಬೇಕೆಂದು ಆದೇಶ ನೀಡಿದ್ದರು ಸಹ ವಿಶ್ವವಿದ್ಯಾನಿಲಯಗಳು ಪಾಲಿಸುತ್ತಿಲ್ಲ.  

ಆದರಿಂದ ತಕ್ಷಣ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ಅಂಕಪಟ್ಟಿ ವಿತರಣೆ  ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು  ಈ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತೇವೆ. ಜೊತೆಗೆ ಅಂಕಪಟ್ಟಿ ವಿತರಣೆಯಲ್ಲಿ ಸುಮಾರು 200 ಕೋಟಿ ಹಣ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಆದರಿಂದ ಅಂಕ ಪಟ್ಟಿ ವಿತರಣೆಗೆ ಸಂಬಂದಿಸಿದಂತೆ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್‌ಎಫ್‌ಐ) ಮಾಡುತ್ತದೆ ಎಂದರು.ಜಿಲ್ಲಾಧ್ಯಕ್ಷ ನಾಗರಾಜ ಇಟಗಿ ಮಾತನಾಡಿ, 51 ಲಕ್ಷ ವಿದ್ಯಾರ್ಥಿಗಳಿಗೆ ತಕ್ಷಣ ಮುದ್ರಿತಾ ಅಂಕಪಟ್ಟಿ ವಿತರಿಸಬೇಕು, ಯು ಸಿ ಸಿ ಎಂ ಎಸ್ ( ಗಅಅಒಖ) ರದ್ದುಗೊಳಿಸಬೇಕು, ಅಂಕಪಟ್ಟಿ ವಿತರಣೆಯಲ್ಲಿ ಹಣ ದುರ್ಬಳಕೆ ಆಗಿದೆ ಆದರಿಂದ ಉನ್ನತ ಮಟ್ಟದ ತನಿಖೆಯಾಗಬೇಕು,  ನಿಗದಿತ ಸಮಯದಲ್ಲಿ ಫಲಿತಾಂಶ ಕೊಡಬೇಕು. ಪದವಿ ಮುಗಿಸಿ ಮುಂದಿನ ಬಿ ಎಡ್ ವಿದ್ಯಾಭ್ಯಾಸ ಕ್ಕೆ ಅಂಕಪಟ್ಟಿ ಮೇಲೆ ಕುಲ ಸಚಿವರ ಸಹಿ ಮತ್ತು ಮೊಹರು ಕಡ್ಡಾಯವಾಗಿ ಹಾಕಬೇಕು ಎಂದರು.ಈ ಸಂದರ್ಭದಲ್ಲಿ  ಎಸ್‌ಎಫ್‌ಐ ಮುಖಂಡರಾದ ಬಾಲಾಜಿ ಜಿ, ಕನಕಾಚಲ ನರೇರ, ಸಚಿನ್ ಕೆ, ಕಿರಣ ಚವ್ಹಣ, ಮಲ್ಲಿಕಾರ್ಜುನ ಪಿ, ಅನಂತ ಟಿ, ಶಿವರಾಜ ನಿಲಗುಂಬಿ, ಮಾಲತೇಶ್  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ವಂದನೆಗಳೊಂದಿಗೆ,ನಾಗರಾಜ ಇಟಗಿಎಸ್‌ಎಫ್‌ಐ ಜಿಲ್ಲಾಧ್ಯಕ್ಷರು