ದೆಹಲಿ: ಮಾಯಾಪುರಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ

fire

ನವದೆಹಲಿ, ಜ 11:ದೆಹಲಿಯ ಮಾಯಾಪುರಿ ಎರಡನೇ ಹಂತದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಕುರಿತ ಕರೆ ಬಂದಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೂಡಲೇ ಒಟ್ಟು 26 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.ಈವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲಾ ಎಂದೂ ಸಹ ಅವರು ತಿಳಿಸಿದ್ದಾರೆ.