ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯ
Demand for 2A reservation for Panchmasali Samaj
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯ
ಹಾವೇರಿ 12: ಬೆಳಗಾವಿಯಲ್ಲಿ ಪೂಜ್ಯ ಜಗದ್ಗುರುಗಳಾದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು, ಕೂಡಲ ಸಂಗಮಪೀಠ ನೇತೃತ್ವದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಬೃಹತ್ ಸಮಾವೇಶದಲ್ಲಿ ಸದರಿ ಪ್ರತಿಬಟನೆಯನ್ನು ಹತ್ತಿಕ್ಕುವ ದುರುದ್ದೇಶದಿಂದ ಪಂಚಮಸಾಲಿ ಸಮಾಜದ ಜಗದ್ಗುರುಗಳ,ಜನರ ಮೇಲೆ ಪೋಲಿಸರ ದೌರ್ಜನ್ಯ ಹಾಗೂ ಲಾಠಿ ಚಾರ್ಜ ಮಾಡಿ ಅಮಾಯಕರ ಮೇಲೆ ಹಲ್ಲೆ ಮಾಡಿ,ಪ್ರಕರಣವನ್ನು ದಾಖಲಿಸಿ ಜಗದ್ಗುರುಗಳನ್ನು ಹಾಗೂ ಮುಖಂಡರನ್ನು ಬಂಧಿಸಿದ ಸರ್ಕಾರದ ಹಾಗೂ ಮುಖ್ಯಮಂತ್ರಿಗಳ ವಿರುದ್ದ ನಗರದ ಹೊಸಮನಿ ಸಿದ್ದಪ್ಪ ಸರ್ಕಲನಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಿ ವಿರುದ್ದ ಪಂಚಮಸಾಲಿ ಸಮಾಜದ ಕಾರ್ಯಕರ್ತರು ತಹಶೀಲ್ದಾರರಿಗೆ ಮನವಿ ನೀಡಲಾಯಿತು.
ಈ ಪ್ರತಿಭಟನೆಯಲ್ಲಿ ಹಾವೇರಿ ಜಿಲ್ಲಾ ಪಂಚಮಸಾಲಿ ಸಮಾಜದ ಮುಖಮಡರಾದ ಗಣ್ಯ ವರ್ತಕರಾದ ಪಿ.ಡಿ. ಶಿರೂರು,ಬಸವರಾಜ ಹಾಲಪ್ಪನವರ,ಜಿಲ್ಲಾಧ್ಯಕ್ಷರು ಪಂಚಮಸಾಲಿ ಸಮಾಜ ಕೂಡಲಸಂಗಮಪೀಠ,ನಾಗೇಂಧ್ರ ಕಟಕೋಳ,ಜಿಲ್ಲಾಧ್ಯಕ್ಷರು ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠ,ಡಾ. ಬಸವರಾಜ ವೀರಾಪೂರ,ಭುವನೇಶ್ವರ ಶಿಡ್ಲಾಪುರ,ಶಂಕರ ಬಿಸಲಳ್ಳಿ,ಬಸವಾರಜ ಗಡೆಕರ,ಬಸವರಾಜ ಗುಂಡೇನಹಳ್ಳಿ, ಮಲ್ಲಿಕಾರ್ಜುನ ಹಾವೇರಿ,ನಂಜುಂಡೆಶ ಕಳ್ಳೇರ,ಬಸವರಾಜ ಹಾವಕ್ಕನವರ,ಜಯಪ್ಪ ದೇಸಳ್ಳಿ,ದಾನಪ್ಪ ಕೆಂಗೊಂಡ,ನಾಗರಾಜ ಕ್ಯಾಬೆಳ್ಳಿ,ವೀರಣ್ಣ ಸಂಗೂರ,ಮಲ್ಲಿಕಾರ್ಜುನ ಅಗಡಿ ಸೇರಿದಂತೆ ಪಂಚಮಸಾಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 