ಕರಗಿನಕೊಪ್ಪ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪ ಬಸ್ಸ್ ನಿಲುಗಡೆಗೆ ಆಗ್ರಹ
Demand for a bus stop near the Government Polytechnic College in Karaginakoppa village
ಕರಗಿನಕೊಪ್ಪ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸಮೀಪ ಬಸ್ಸ್ ನಿಲುಗಡೆಗೆ ಆಗ್ರಹ
ಮುಂಡಗೋಡ 05: ತಾಲೂಕಿನ ಕರಗಿನಕೊಪ್ಪ ಗ್ರಾಮದ ಹತ್ತಿರ ಇರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜ ಹತ್ತಿರ ಬಸ್ಸುಗಳನ್ನು ನಿಲುಗಡೆ ಮಾಡುವಂತೆ ನೂರಾರು ವಿದ್ಯಾರ್ಥಿಗಳೊಂದಿಗೆ ಸೋಮವಾರ ಬೆಳಗ್ಗೆ ಪ್ರತಿಭಟನೆ ಹಮ್ಮಿಕೊಂಡು ಮನವಿ ಸಲ್ಲಿಸಿದರು.
ತಾಲೂಕಿನ ಕರಗಿನಕೊಪ್ಪ ಗ್ರಾಮದ ಬಳಿ ಮುಂಡಗೋಡ ಹಾನಗಲ್ ಶಿರಸಿ-ಹುಬ್ಬಳ್ಳಿ ಮಾರ್ಗದ ಬಸ್‌ಗಳನ್ನು ನಿಲುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಜತೆಗೂಡಿ ಪೊಲೀಸ ಠಾಣೆಗೆ ಬಂದು ಸಿಪಿಐ ರಂಗನಾಥ ನಿಲಮ್ಮನವರಿಗೆ ಭೇಟಿಯಾಗಿ ಬಸ್ ನಿಲುಗಡೆಯ ಕುರಿತು ನಾವು ಹಲವಾರು ಬಾರಿ ಮನವಿ ಅರ್ಿಸಿದ್ದೇವೆ ಆದರೂ ಸಹಿತ ಬಸ್‌ಗಳು ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ ಮನೆಗೆ ತೆರಳಲು ಸಾಧ್ಯವಾಗುತ್ತಿಲ್ಲ.ಹೀಗೆ ಮುಂದುವರೆದರೆ ನಾವು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲಾ ತಿಳಿಸಿದ್ದಾರೆ.
ಸಿಪಿಐ ರಂಗನಾಥ್ ನಿಲಮ್ಮನವರ ಸಾರಿಗೆ ಅಧಿಕಾರಿಗಳನ್ನು ಪೋಲಿಸ್ ಠಾಣೆಗೆ ಕರೆಸಿ ಬಸ್ ಸಮಸ್ಯೆ ಕುರಿತು ಚರ್ಚಿಸಿ ಬಸ್‌ಗಳು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.ಈ ವೇಳೆಯಲ್ಲಿ ಸಿಪಿಐ ರಂಗನಾಥ್ ನಿಲಮ್ಮನವರ ಪಿಎಸ್‌ಐ ಪರಶುರಾಮ ಮಿರ್ಜಿಗಿ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 