ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಆಗ್ರಹ
ಸಿಂದಗಿ 17: ಮಾದಿಗ ಸಮುದಾಯದ ಬಹು ವರ್ಷಗಳ ಬೇಡಿಕೆಯಾದ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೊಳಿಸುವಂತೆ ಮತಕ್ಷೇತ್ರದ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ ಕರ್ನಾಟಕ ಮಾದಿಗರ ಸಂಘ ತಾಲ್ಲೂಕು ಶಾಖೆ ಮತ್ತು ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ಮಾದಿಗ ಸಮುದಾಯದ ಮುಖಂಡರು ಶಾಸಕ ಅಶೋಕ ಮನಗೂಳಿ ಅವರಿಗೆ ಮನವಿ ಸಲ್ಲಿಸಿದರು.
ಮಾದಿಗ ದಂಡೋರ ಹೋರಾಟ ಸಮಿತಿ ತಾಲೂಕು ಶಾಖೆ ಅಧ್ಯಕ್ಷ ಸಾಯಬಣ್ಣ ಪುರದಾಳ ಮಾತನಾಡಿ, ಸುಪ್ರೀಂಕೋರ್ಟ್ ಮಾದಿಗರ ಒಳಮೀಸಲಾತಿ ಜಾರಿಗೆ ಐತಿಹಾಸಿಕ ತೀರ್ು ನೀಡಿದ್ದು, ಈಗಾಗಲೇ ಹರಿಯಾಣ, ಪಂಜಾಬ ರಾಜ್ಯಗಳ ಸರ್ಕಾರಗಳು ಒಳಮೀಸಲಾತಿ ಜಾರಿಗೊಳಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾಪೂರ್ವದಲ್ಲಿ ಕೊಟ್ಟ ಮಾತಿನಂತೆ ವಿಳಂಬ ಮಾಡದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಮಾದಿಗ ಸಂಘ ತಾಲೂಕು ಶಾಖೆ ಅಧ್ಯಕ್ಷ ಯಲ್ಲೂ ಇಂಗಳಗಿ ಮಾತನಾಡಿದರು.
ಮನವಿ ಸ್ವೀಕರಿಸಿದ ಶಾಸಕ ಅಶೋಕ ಮನಗೂಳಿ, ಅಧಿವೇಶನದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮಾದಿಗ ಸಮುದಾಯದ ಮುಖಂಡರಾದ ಪ್ರಧಾನಿ ಮೂಲಿಮನಿ, ಸಿದ್ದು ಪೂಜಾರಿ, ಖಾಜೂ ಬಂಕಲಗಿ, ಸಿದ್ದು ಯಂಕಂಚಿ, ಭೀಮಾಶಂಕರ ರತ್ನಾಕರ, ರವಿ ಕಲಹಳ್ಳಿ, ಜಟ್ಟೆಪ್ಪ ಶಿರಸಗಿ, ನಾಗೂ ಕಟ್ಟಿಮನಿ, ಜೆ.ವೈ.ಹೊಸಮನಿ, ಸುರೇಶ ಕಟ್ಟಿಮನಿ, ಪರಶು ಗೊರವಗುಂಡಗಿ ಪಾಲ್ಗೊಂಡಿದ್ದರು.