ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ  Demand to appoint D.T. Srinivas as a minister

ಧಾರವಾಡ 06 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಿ.ಟಿ. ಶ್ರೀನಿವಾಸ್ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರೆ​‍್ಡಗೊಳಿಸುವಂತೆ ಧಾರವಾಡ ಜಿಲ್ಲಾ ಯಾದವ (ಗೊಲ್ಲ) ಕ್ಷೇಮಾಭಿವೃದ್ಧಿ ಸಂಘವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.  

ಡಿ.ಟಿ. ಶ್ರೀನಿವಾಸ್ ಅವರು ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಂಘವು ಆಗ್ರಹಿಸಿದೆ.  

ಹಿಂದುಳಿದ ವರ್ಗಗಳ (ಒಬಿಸಿ) ಪ್ರಭಾವಿ ನಾಯಕರಾಗಿರುವ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷಕ್ಕೂ ಹಾಗೂ ರಾಜ್ಯದ ಜನತೆಗೂ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಸಂಘದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.  

ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗಾಗಿ ಅವರು ಸಲ್ಲಿಸಿರುವ ಸೇವೆ, ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆ ಹಾಗೂ ಆಡಳಿತಾತ್ಮಕ ಅನುಭವವನ್ನು ಪರಿಗಣಿಸಿ ಮುಖ್ಯಮಂತ್ರಿ ಅವರು ಸಚಿವ ಸ್ಥಾನ ನೀಡಬೇಕು ಎಂದು ಸಂಘವು ಮನವಿ ಮಾಡಿದೆ.  

ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಯಾದವ (ಗೊಲ್ಲ) ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ನೇತ್ರಾವತಿ ಗೊಲ್ಲರ್, ಕಾರ್ಯದರ್ಶಿ ಗುರುನಾಥ ಹುಲಗೂರ್, ಉಪಾಧ್ಯಕ್ಷ ವಿಶಾಲ್ ಗೌಳಿ, ಗೌರವಾಧ್ಯಕ್ಷ ಕಾಕರಂಗ ಸ್ವಾಮಿ, ಸಂಘಟನಾ ಕಾರ್ಯದರ್ಶಿ ಬಾಬು ಗೌಳಿ, ಸದಸ್ಯರಾದ ಭೀಮನಗೌಡ ಕಡಕೋಳ, ಪ್ರಕಾಶ್ ಗದಗವಾಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.