ವಿಜಯಪುರದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಆರೋಪಿಗಳನ್ನು ಬಂಧಿಸಲು ಆಗ್ರಹ
ವಿಜಯಪುರ 14: ದಲಿತ ಮಹಿಳೆ ಮೇಲೆ ದೌರ್ಜನ್ಯ ಎಸಗಿ, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಅಖಿಲ ವಾಲ್ಮಿಕಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ವಿಜಯಪುರ ನಗರದ ದರ್ಗಾ ಹತ್ತಿರದ, ವಸಂತ ನಗರದ ದಲಿತ ಮಹಿಳೆಯಾದ ಶಾಂತಾಬಾಯಿ ಗಂ. ಸುಭಾಸ ಚಲವಾದಿ ಅವರ ಮೇಲೆ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ದಿ: 14 ರಂದು ಅಮಾನುಷವಾಗಿ ದೌರ್ಜನ್ಯ ಎಸಗಿ, ಹಲ್ಲೆ ಮಾಡಿದ ಸವರ್ಣಿ ವರ್ಗಕ್ಕೆ ಸೇರಿದ ಆರೋಪಿಗಳಾದ ಕಾಳಪ್ಪ ಬಡಿಗೇರ ಹಾಗೂ ಆತನ ಸಹಚರರನ್ನು ಕೂಡಲೇ ಬಂಧಿಸಿ, ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಸ್ವಾತಂತ್ರ್ಯ ಬಂದು 76 ವರ್ಷ ಗತಿಸಿದರು. ಇನ್ನು ಶೋಷಿತ, ದಲಿತ ಮಹಿಳೆಯರ ಮೇಲೆ ಅನ್ಯಾಯ ದೌರ್ಜನ್ಯ, ದಬ್ಬಾಳಿಕೆಗಳು ಮೇಲಿಂದ ಮೇಲೆ ವಿಜಯಪುರ ಜಿಲ್ಲೆಯಲ್ಲಿ ಘಟಿಸುತ್ತಿವೆ. ವಿಶ್ವಕ್ಕೆ ಸಾರಿದ ಸಮಾನತೆ ಸಾರಿದ ಅಣ್ಣ ಬಸವಣ್ಣನವರ ಜನ್ಮ ಸ್ಥಳದಲ್ಲಿ ಅಸ್ಪೃಶ್ಯತೆ ಆಚರಣೆ ಅನ್ಯಾಯ ಅತ್ಯಚಾರ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಬೆಳವಣಿಗೆ ಕೂಡಲೇ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಇಂತಹ ಘಟನೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ದಲಿತರ ಮೇಲೆ ನಡೆಯುವ ದೌರ್ಜನ್ಯಗಳಿಗೆ ಕಡಿವಾಣ ಹಾಕಿ ದಲಿತರು ಜಿಲ್ಲೆಯಲ್ಲಿ ಶಾಂತಿಯುತವಾಗಿ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ದಲಿತ ಮುಖಂಡರಾದ ಬಸವರಾಜ ಕಾಂಬಳೆ ಮಾತನಾಡಿ, ಅಮಾಯಕ ಬಡ ದಲಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿ, ಹಲ್ಲೆ ಮಾಡಿದ್ದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಕುಬಕಡ್ಡಿ, ನಾಗೇಶ ಚಲವಾದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.