ಸಿಂದಗಿಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಘೋಷಿಸಲು ಆಗ್ರಹ
Demand to declare Sindagi a separate Lok Sabha constituency
ಲೋಕದರ್ಶನ ವರದಿ
ಸಿಂದಗಿ 2: ಕೇಂದ್ರ ಸರ್ಕಾರ ಕೈಗೆತ್ತಿಕೊಳ್ಳಲಿರುವ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವೇಳೆ ಸಿಂದಗಿಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಘೋಷಿಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ 13 ತಾಲೂಕುಗಳಿದ್ದು, ಪುನರ್ವಿಂಗಡಣೆ ಸಂದರ್ಭದಲ್ಲಿ ಜಿಲ್ಲೆಯ ಭೌಗೋಳಿಕ ಹಾಗೂ ಜನಸಂಖ್ಯಾ ವ್ಯಾಪ್ತಿಯನ್ನು ಪರಿಗಣಿಸಿ ಸಿಂದಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರು, ವಿವಿಧ ಸಂಘಟನೆಗಳು, ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಹೋರಾಟ ನಡೆಸಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಶಿಕ್ಷಕರ ಕೊರತೆ ನಿವಾರಣೆಗೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಂಟನೇ ತರಗತಿ ಪ್ರವೇಶ, ವರ್ಗಾವಣೆ ಪ್ರಮಾಣಪತ್ರ ವಿತರಣೆ ಹಾಗೂ ಶಾಲೆಗಳ ಆಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪೋಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು 9 ಮತ್ತು 10ನೇ ತರಗತಿಗಳಿಗೆ ಬೋಧನೆಗೆ ನಿಯೋಜಿಸಿರುವ ಆದೇಶವನ್ನು ಸರ್ಕಾರ ಮರುಪರೀಶೀಲಿಸಬೇಕು. ಶಿಕ್ಷಕರ ಕೊರತೆಯನ್ನು ಖಾಲಿ ಹುದ್ದೆಗಳ ಭರ್ತಿಯ ಮೂಲಕವೇ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದರು.
ಶಿಕ್ಷಕರ ಹಾಜರಾತಿಗಾಗಿ ಜಾರಿಗೊಳಿಸಿರುವ ಹೊಸ ವ್ಯವಸ್ಥೆಯ ಉದ್ದೇಶ ಉತ್ತಮವಾದರೂ, ಅದರ ಬಗ್ಗೆ ಸಮರ್ಕ ಜಾಗೃತಿ ಮೂಡಿಸಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಶಿಕ್ಷಕರಿಗೆ ಅನಗತ್ಯ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಸಾಯಬಣ್ಣ ದೇವರಮನಿ, ಶಿವು ರೋಡಗಿ, ಸಿದ್ರಾಮ ಆನಗೊಂಡ ಹಾಗೂ ಶ್ರೀಮಂತ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 