ಗದಗ ರೈಲ್ವೆ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜರ ಹೆಸರು ನಾಮಕರಣ ಮಾಡುವಂತೆ ಒತ್ತಾಯ
Demand to name Gadag railway station after Pandit Puttaraja
ಗದಗ ರೈಲ್ವೆ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜರ ಹೆಸರು ನಾಮಕರಣ ಮಾಡುವಂತೆ ಒತ್ತಾಯ
ಗದಗ 15: ನವೀಕೃತಗೊಂಡ ಗದಗ ರೈಲ್ವೆ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿ ಮಂಗಳವಾರ (ಅ. 15) ಗದಗ ದಿಂದ ಹೋರಾಟ ಮಾಡಲು ತಿರ್ಮಾನಿಸಿದ್ದು, ರಾಜ್ಯಾಧ್ಯಂತ ಈ ಹೋರಾಟ ನಡೆಯಲಿದೆ. ಪುಟ್ಟರಾಜರ ಹೆಸರಿಡುವಂತೆ ನಾವು ಭಿಕ್ಷೆ ಬೇಡುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾನೂನು ಮಂತ್ರಿ ಎಚ್. ಕೆ ಪಾಟೀಲ ಸರ್ಕಾರದ ಮೇಲೆ ಒತ್ತಡ ತಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಬೇಕು ಅಂತ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದ್ವಿಭಾಷಾ ನೀತಿ ಮಾಡಿದೆ. ಇದನ್ನು ಕೈಬಿಟ್ಟು ತಮಿಳುನಾಡು ಮಾದರಿಯಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಬೇಕು. ಕನ್ನಡಿಗರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವ ಕೇಲಸವನ್ನು ಬೇರೆ ರಾಜ್ಯದವರು ಮಾಡುತ್ತಿದ್ದಾರೆ. ಇದಕ್ಕೆ ಕಠಿವಾಣ ಹಾಕಬೇಕು. ತಮಿಳುನಾಡು, ಮಹಾರಾಷ್ಟ್ರ, ಕೆರಳದಲ್ಲಿ ಸ್ಥಳಿಯ ಭಾಷೆ ಮಾತನಾಡದಿದ್ದರೇ ಬೇರೆಯವರಿಗೆ ಅಲ್ಲಿ ಜಾಗ ನೀಡುವುದಿಲ್ಲ. ಆದರೆ, ಬೆಳಗಾವಿ ಸೇರಿ ಹಲವು ಭಾಗಗಳಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿರುವುದು ನೋವಿನ ಸಂಗತಿಯಾಗಿದೆ ಅಂತ ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಕ್ರಮ ಹೊರ ರಾಜ್ಯದವರಿಗೆ 60 ರಿಂದ 70 ಸಾವಿರ ಪಡಿತರ ಚೀಟಿ ನೀಡಲಾಗಿದೆ. ಇವುಗಳನ್ನು ರದ್ದುಗೋಳಿಸಬೇಕು. ಕನ್ನಡ ನಾಮಫಲಕಗಳು ಶೇ. 60ಅ ಇರಬೇಕು ಅಂತ ಕಾನೂನು ತಂದರೂ ಅದು ಸರಿಯಾಗಿ ಇನ್ನೂ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರದ ವೈಫಲ್ಯವಾಗಿದೆ. ಉತ್ತರ ಭಾರತದ ಕಾರ್ಖಾನೆಗಳು ರಾಜ್ಯದಲ್ಲಿ ದರ್ಬಾರ್ ನಡೆಸುತ್ತಿವೆ. ಅಲ್ಲಿ ಕನ್ನಡಿಗರಿಗೆ ಅವಕಾಶ ನೀಡುತ್ತಿಲ್ಲ. ಗ್ರೇಟರ್ ಬೆಂಗಳೂರು ಬದಲಾಗಿ ಗ್ರೇಟರ್ ಉತ್ತರ ಕರ್ನಾಟಕ ಮಾಡಿ ಅಂತ ಬೇಕ್ರಿ ರಮೇಶ್ ಆಗ್ರಹಿಸಿದರು.*ಕೋಟ್..*ಕನ್ನಡದ ಪ್ರಥಮ ಸಾಮ್ರಾಜ್ಯ ಸ್ಥಾಪನೆ ಮಾಡಿದ ಕದಂಬ ಚಕ್ರವರ್ತಿ ಮಯೂರ ವರ್ಮ ಹಾಗೂ ಚಾಲುಕ್ಯ ಪರಮೇಶ್ವರ ಇಮ್ಮಡಿ ಪುಲಿಕೇಶಿ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಮುಂದೆ ಮತ್ತು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಸ್ಥಾಪನೆ ಮಾಡಬೇಕು.ಎಂ. ಪಿ ಮುಳಗುಂದ ರೈತ ಮುಖಂಡಪತ್ರಿಕಾ ಗೋಷ್ಠಿ ವೇಳೆ ಕದಂಬ ಸೈನ್ಯ ರಾಜ್ಯ ಉಪಾಧ್ಯಕ್ಷ ಎನ್ ಸಿ ಕಾಂಬಳೆ, ಕಾರ್ಯದರ್ಶಿ ವಿನಾಯಕ ಸಂಡೂರ, ರಾಮನಗರ ಜಿಲ್ಲಾ ಅಧ್ಯಕ್ಷ ಉಮೇಶ್ ರಾಂಪುರ, ಗದಗ ಜಿಲ್ಲಾ ಉಪಾಧ್ಯಕ್ಷ ಗವಿಶಿದ್ಧಯ್ಯ ಹಳ್ಳಿಕೇರಿಮಠ, ರಾಮನಗರ ಜಿಲ್ಲಾ ಸಮಿತಿ ಸದಸ್ಯ ಲಕ್ಷ್ಮಣ ಚನ್ನಪಟ್ಟಣ, ಅಶೋಕ, ಸಿದ್ದು ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಕದಂಬ ಸೈನ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 