ಸಚಿವ ಸಂಪುಟದ ಖಾಲಿ ಸ್ಥಾನಕ್ಕೆ ಬ್ರಾಹ್ಮಣರಿಗೆ ಆದ್ಯತೆ ನೀಡಲು ಆಗ್ರಹ
Demand to prioritize Brahmins for the vacant Cabinet post
ಅಥಣಿ 04 : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬ್ರಾಹ್ಮಣ ಸಮಾಜಕ್ಕೆ ಅವಕಾಶ ನೀಡದಿರುವುದನ್ನು ಅಥಣಿ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ಹಿರಿಯ ನ್ಯಾಯವಾದಿ ಎನ್.ಕೆ. ಪಾಟೀಲ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬ್ರಾಹ್ಮಣ ಸಮುದಾಯದ ಪ್ರತಿನಿಧಿತ್ವವಿಲ್ಲದೆ ಸಚಿವ ಸಂಪುಟ ರಚನೆಯಾಗಿದೆ ಎಂದು ಹೇಳಿದ್ದಾರೆ. ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಬ್ರಾಹ್ಮಣ ಸಮಾಜದ ಶಾಸಕರಿಗೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ. ಬ್ರಾಹ್ಮಣ ಸಮುದಾಯವು ರಾಜ್ಯದ ರಾಜಕೀಯ, ಧಾರ್ಮಿಕ, ಆಡಳಿತಾತ್ಮಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ತಂತ್ರಜ್ಞಾನ ಹಾಗೂ ಸಾಹಿತ್ಯ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಇಂತಹ ಸಮುದಾಯವನ್ನು ಸಚಿವ ಸಂಪುಟದಲ್ಲಿ ಕಡೆಗಣಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಅಥಣಿ ಬ್ರಾಹ್ಮಣ ಸಮಾಜ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಆದಿತ್ಯ ಮಾಶಾಳ ಹಾಗೂ ಉಪಾಧ್ಯಕ್ಷ ಸುಧೀಂದ್ರ ಬಾದರಾಯಣಿ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಬ್ರಾಹ್ಮಣ ಸಮಾಜವನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 