ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಉಳಿಸುವಂತೆ ಒತ್ತಾಯ
Demand to save Mahatma Gandhi National Employment Guarantee Scheme
ಹಾವೇರಿ 18: ನಗರದ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಉಳಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ ಜರುಗಿತು. ಈ ವೇಳೆ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯ ಯೋಜನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಹೆಸರು ಬದಲಾವಣೆ ಮಾಡುತ್ತಿರುವ ನಿಲುವುಗಳನ್ನು ಖಂಡಿಸಲಾಯಿತು.
ಇಂದಿರಾ ಆವಾಸ್ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಯಾಗಿ, ನಗರ ನವೀಕರಣಕ್ಕೆ ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ ಬದಲಿಗೆ ಅಟಲ್ ಮಿಷನ್ ಎಂಬುದಾಗಿ, ನಿರ್ಮಲ ಗ್ರಾಮ ಯೋಜನೆಯನ್ನು ಸ್ವಚ್ಛ ಭಾರತ ಮಿಷನ್ ಎಂಬುದಾಗಿ ಬದಲಾಯಿಸಿದೆ. ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಿಬಿ ಜಿ ರಾಮ ಜಿ ಎಂದು ಘೋಷಿಸುತ್ತಿದೆ.
ಈ ಮೂಲಕ ಮಹಾತ್ಮ ಗಾಂಧಿಯವರ ಹೆಸರು ಅಳಿಸಿ ಜಿ- ರಾಮ್ ಅಂದರೆ ಗೋಡ್ಸೆ ರಾಮ್ ಎಂಬುದಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಮನರೇಗಾ ಯೋಜನೆಯನ್ನು ಉಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನಸಭೆ ಉಪಸಭಾಧ್ಯಕ್ಷರಾದ ರುದ್ರ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ,
ಪ್ರಕಾಶ ಕೋಳಿವಾಡ, ಯಾಸೀರ್ ಅಹ್ಮದ್ ಖಾನ್ ಪಠಾಣ, ಹೆಸ್ಕಾಂ ಅಧ್ಯಕ್ಷರಾದ ಸಯ್ಯದ್ ಅಜ್ಜಿಂಫೀರ್ ಎಸ್.ಖಾದ್ರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೋಹನ ಲಿಂಬಿಕಾಯಿ, ಮುಖಂಡರಾದ ಎಸ್.ಎಫ್.ಎನ್.ಗಾಜಿಗೌಡ್ರ, ಕೊಟ್ರೇಶಪ್ಪ ಬಸೇಗಣ್ಣಿ, ಪ್ರೇಮಾ ಪಾಟೀಲ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವಕುಮಾರ ನೀರಲಗಿ, ಯುವ ಘಟಕದ ಅಧ್ಯಕ್ಷರಾದ ದರ್ಶನ ಲಮಾಣಿ, ಬಸವರಾಜ ಹೆಡಿಗೊಂಡ,ಶಂಕರ ಮೆಹರವಾಡೆ, ಶ್ರೀಧರ ದೊಡ್ಡಮನಿ,ಯಲ್ಲಪ್ಪ ದೇವಗಿರಿ ಮತ್ತು ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 