9 - 10ನೇ ತರಗತಿಗೆ ಪಿಯು ಉಪನ್ಯಾಸಕರ ಬೋಧನೆ ಆದೇಶ ಹಿಂಪಡೆಯಲು ಆಗ್ರಹ
Demand to withdraw order for PU lecturers to teach Classes 9 and 10
ಲೋಕದರ್ಶನ ವರದಿ
ಸಿಂದಗಿ 2: ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರೌಢಶಾಲೆಯ 9 ಮತ್ತು 10ನೇ ತರಗತಿಗಳಿಗೆ ಕಡ್ಡಾಯವಾಗಿ ಬೋಧನೆ ಮಾಡುವಂತೆ ಹೊರಡಿಸಿರುವ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ತಾಲೂಕು ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಚ್.ಜಿ. ಕಾಲೇಜಿನ ಪ್ರಾಚಾರ್ಯ ಹಾಗೂ ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಆರ್. ಹೆಗ್ಗಣದೊಡ್ಡಿ ಮಾತನಾಡಿ, ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸುವ ಉದ್ದೇಶ ಶ್ಲಾಘನೀಯವಾದರೂ, ಅದರ ಪರಿಹಾರಕ್ಕಾಗಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮೇಲೆ ಹೆಚ್ಚುವರಿ ಬೋಧನಾ ಜವಾಬ್ದಾರಿ ಹೊರಿಸುವುದು ಸಮಂಜಸವಲ್ಲ ಎಂದು ಹೇಳಿದರು.
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್. ವಿದ್ಯಾರ್ಹತೆ ಹೊಂದಿರುವ ಷ್ಪಹ್ಪಳ್ಪಿಳ್ಲಹಿ'್ತೈ' ಅಧಿಕಾರಿಗಳಾಗಿದ್ದು, ಅವರ ಸೇವಾ ನಿಯಮಗಳು, ವೇತನ ಶ್ರೇಣಿ ಹಾಗೂ ಆಡಳಿತಾತ್ಮಕ ಜವಾಬ್ದಾರಿಗಳು ಪ್ರೌಢಶಾಲಾ ಶಿಕ್ಷಕರಿಗಿಂತ ಭಿನ್ನವಾಗಿವೆ. ಇಂತಹ ಸಂದರ್ಭದಲ್ಲಿ 9 ಮತ್ತು 10ನೇ ತರಗತಿಗಳಿಗೆ ಕಡ್ಡಾಯ ಬೋಧನೆ ನಿಯೋಜಿಸುವುದು ಸೇವಾ ನಿಯಮಗಳಿಗೆ ವಿರುದ್ಧವಾಗಿದ್ದು, ಪದವಿ ಪೂರ್ವ ಶಿಕ್ಷಣದ ಗುಣಮಟ್ಟಕ್ಕೂ ಧಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಈ ಕುರಿತು ಶಿಕ್ಷಣ ತಜ್ಞರು, ಉಪನ್ಯಾಸಕರ ಸಂಘಗಳು ಹಾಗೂ ಸಂಬಂಧಿತ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದು ಸೂಕ್ತವಲ್ಲ ಎಂದು ಆರೋಪಿಸಿದರು.
ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 9 ಮತ್ತು 10ನೇ ತರಗತಿಗಳ ಬೋಧನೆ ಕಡ್ಡಾಯಗೊಳಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿ.ಎಂ. ಸಿಂಗನಳ್ಳಿ, ಎನ್.ಬಿ. ಪೂಜಾರಿ, ಎಫ್.ಎ. ಹಾಲಪ್ಪನವರ, ಪ್ರಸನ್ನ ಜೋಗೂರ, ಎಸ್.ಎಸ್. ತಾಳಿಕೋಟಿ, ಎಸ್.ಎಚ್. ಮಡಿವಾಳರ, ಡಾ. ಶರಣಬಸವ ಜೋಗೂರ, ಜಿ.ಎಂ. ಹಯ್ಯಾಳಕರ, ಎಂ.ಎನ್. ಅಜ್ಜಪ್ಪ, ಎಸ್.ಜಿ. ಪಾಟೀಲ, ಎಸ್.ಎ. ಬಸರಕೋಡ, ಆರ್.ಎಂ. ನಾರಾಯಣಕರ, ಜಿ.ಎಸ್. ಆನೆಗುಂದಿ, ಪಿ.ವಿ. ಮಹಾಲಿಂಗಮಠ, ಬಿ.ಬಿ. ಜಮಾದಾರ, ಡಾ. ಪ್ರಮೋದ ಕಟ್ಟಿ, ಎಂ.ಬಿ. ಕಲಶೆಟ್ಟಿ ಸೇರಿದಂತೆ ಹಲವಾರು ಉಪನ್ಯಾಸಕರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 