ಅಭಿವೃದ್ದಿಶೀಲ ರಾಷ್ಟ್ರಕ್ಕೆ ಪ್ರಜಾಪ್ರಭುತ್ವವೇ ತಳಪಾಯ: ಬಸವರಾಜ ಕುರಗುಂದ
Democracy is the foundation of a developing nation: Basavaraja Kuragunda
ಅಭಿವೃದ್ದಿಶೀಲ ರಾಷ್ಟ್ರಕ್ಕೆ ಪ್ರಜಾಪ್ರಭುತ್ವವೇ ತಳಪಾಯ: ಬಸವರಾಜ ಕುರಗುಂದ
ಗದಗ 16 : ಪ್ರಜೆಗಳೇ ಪ್ರಜೆಗಳಿಗಾಗಿ ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆಯಾದ ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹು ದೊಡ್ಡ ಅಸ್ತ್ರ. ಇಂತಹ ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯ , ಕಲಿತ ಮೌಲ್ಯಗಳು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿಯೆ ಬಳಸಬೇಕಾದ ಅನಿವಾರ್ಯತೆ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಆಡಳಿತದ ಭಾರತದಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲದೇ ಜನರ ಪರಿಸ್ಥಿತಿ ಸಂಕಷ್ಟದಲ್ಲಿತ್ತು. ಸಾಮಾಜಿಕ, ಆರ್ಥಿಕ, ರಾಜಕೀಯ, ಸಮಾನತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಅಭಿವೃದ್ಧಿಶೀಲ ರಾಷ್ಟವಾಗಿದೆ. ಇದಕ್ಕೆ ನಮ್ಮ ಸುಭದ್ರ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನವೇ ಕಾರಣವಾಗಿದೆ ಎಂದು ಸರ್ಕಾರಿ ಪ್ರದಮದರ್ಜೆ ಮಹಾವಿದ್ಯಾಲಯ ಶಿರಹಟ್ಟಿಯ ಸಹಾಯಕ ಪ್ರಾಧ್ಯಾಪಕರಾದ ಬಸವರಾಜ ಕುರಗುಂದ ತಿಳಿಸಿದರು.
ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗವು ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಪ್ರಪಂಚದ 162 ದೇಶಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ.15ರಂದು ಆಚರಿಸಲಾಗುತ್ತದೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಈ ದಿನವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ. ರಾಜ್ಯ ಸರಕಾರವು 'ನಮ್ಮ ಮತ ನಮ್ಮ ಹಕ್ಕು' ಘೋಷಣೆಯಡಿ ಪ್ರಜಾಪ್ರಭುತ್ವ ದಿನವನ್ನು ಈ ವರ್ಷ ಆಚರಿಸುತ್ತಿದೆ ಎಂದರು.
ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೊ. ಚಂದಾಲಿಂಗಪ್ಪ ಸಂವಿಧಾನ ರಚನೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಎಲ್ಲರಿಗೂ ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದರು.ಕಾರ್ಯಕ್ರಮವನ್ನು ಕು. ರುಕ್ಸಾರ್ ಕೊಪ್ಪಳ ನಿರೂಪಿಸಿದರು. ಕು. ಬಸಮ್ಮ ಜಗ್ಗಲ್ ಪ್ರಾರ್ಥಿಸಿದರು. ಮೌಲಾಲಿ ನಧಾಪ್ ವಂದಿಸಿದರು. ಮಹಾವಿದ್ಯಾಲಯದ ಎಲ್ಲ ಬೋಧಕ ಸಿಬ್ಬಂಧಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 