ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಗುಲಾಂ ನಭಿ ಆಜಾದ್

ಬೆಂಗಳೂರು 10: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕೂಟದ ಶಾಸಕರನ್ನು ಹಿಡಿದಿಟ್ಟುಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್ ಧುರೀಣ, ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಭಿ ಆಜಾದ್ ವಾಗ್ದಾಳಿ ನಡೆಸಿದ್ದಾರೆ.  

   ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಕ್ರಮ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ಈ ಬೆಳವಣಿಗೆ ಮಾರಕವಾಗಿದೆ. ಪ್ರಜಾಪ್ರಭುತ್ವಕ್ಕೆ ಗೌರವ ನೀಡದ ಬಿಜೆಪಿ ಧೋರಣೆ ಖಂಡನೀಯ ಎಂದರು. 

   ಮುಂಬೈನ ಹೋಟೆಲ್ ನಲ್ಲಿ ಮೈತ್ರಿಕೂಟದ ಶಾಸಕರನ್ನು ಭೇಟಿ ಮಾಡಲು ತೆರಳಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಅಲ್ಲಿನ ಪೊಲೀಸರು ತಡೆದ ಕ್ರಮ ಸರಿಯಲ್ಲ. ಅಲ್ಲಿ ಬಿಜೆಪಿ ಆಡಳಿತವಿದ್ದು, ಕಾಂಗ್ರೆಸ್ ನಾಯಕರನ್ನು ತಡೆಯುವಂತಹ ವ್ಯವಸ್ಥಿತ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಸಂವಿಧಾನದಲ್ಲಿ ಮುಕ್ತ ಸಂಚಾರಕ್ಕೆ ಅವಕಾಶವಿದ್ದು, ಬಿಜೆಪಿ ನಾಯಕರ ವರ್ತನೆ ಪ್ರಜಾಪ್ರಭುತ್ವಕ್ಕೆ  ವಿರುದ್ಧವಾಗಿದೆ ಎಂದು ಟೀಕಿಸಿದರು.  

  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ನಿಧರ್ಾರ ಹಿಂಪಡೆಯುತ್ತಾರೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಆಂತರಿಕವಾಗಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇನೆ ಎಂದು ಹೇಳಿದರು.  ಇದಕ್ಕೂ ಮುನ್ನ ಕೃಮಾರ ಕೃಪ ಅತಿಥಿ ಗೃಹದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಗುಲಾಂ ನಭಿ ಆಜಾದ್ ಚರ್ಚೆ ನಡೆಸಿದರು. ಅತೃಪ್ತ ಶಾಸಕರು ದೆಹಲಿಗೆ ತೆರಳಲು ತಾವು ಕಾರಣ ಎನ್ನುವ ಆಪಾದನೆ ಬಗ್ಗೆ ಸ್ಪಷ್ಟೀಕರಣ ನೀಡಿದ ಸಿದ್ದರಾಮಯ್ಯ, ಈ ಬೆಳವಣಿಗೆಗೂ ತಮಗೂ ಸಂಬಂಧವಿಲ್ಲ. ರಮೇಶ್ ಜಾರಕಿಹೊಳಿ ಅವರಿಂದಲೇ ಇದೆಲ್ಲಾ ಕಿತಾಪತಿ ಆರಂಭವಾಯಿತು. ನಂತರ ನಮ್ಮ ನಿಯಂತ್ರಣಕ್ಕೆ ಸಿಗದಂತಹ ರಾಜಕೀಯ ಬೆಳವಣಿಗೆಗಳು ನಡೆದಿವೆ ಎಂದು ಸಮಜಾಯಿಷಿ ನೀಡಿದ್ದಾರೆ ಎನ್ನಲಾಗಿದೆ.