ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ವಿಠ್ಠಲ ಕಟಕಧೋಂಡ

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ವಿಠ್ಠಲ ಕಟಕಧೋಂಡ Democratic principle is important for establishing equality: Vitthal Katakadhonda

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಮಹತ್ವವಾಗಿದೆ: ವಿಠ್ಠಲ ಕಟಕಧೋಂಡ 

ವಿಜಯಪುರ, ಸೆಪ್ಟೆಂಬರ್ 15 : ಸಂವಿಧಾನದ ಮುಂದೆ ದೇಶದ ಎಲ್ಲ ಪ್ರಜೆಗಳು ಸಮಾನರು ಎಂಬ ಸಮಾನತೆ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಮಹತ್ವದಾಗಿದೆ ಎಂದು ಶಾಸಕ ವಿಠ್ಠಲ ಧೋಂಡಿಬಾ ಕಟಕಧೋಂಡ ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನನ್ನ ಮತ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಅನೇಕ ದೇಶಗಳಲ್ಲಿ ಹಂತ ಹಂತವಾಗಿ ಸಂವಿಧಾನ ಜಾರಿಗೆ ಬಂದು ಅಲ್ಲಿನ ಜನತೆಗೆ ಸಮಾನತೆ ದೊರಕಲು ದೀರ್ಘ ಕಾಲ ಪಡೆಯಿತು. ಆದರೆ, ವಿವಿಧತೆಯಲ್ಲಿ ಏಕತೆವಿರುವ ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಆಧಾರದ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಪ್ರತಿಯೊಬ್ಬರಿಗೂ ಸಮಾನತೆ ದೊರೆತಿದೆ ಎಂದು ಅವರು ಹೇಳಿದರು.  

ಸರ್ವರ ಏಳ್ಗೆಯ ಅಂಶಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳನ್ನು ಸಾರ್ವಜನಿಕರು ಅರಿತುಕೊಂಡು ತಮ್ಮ ಹಕ್ಕು ಪಡೆದುಕೊಳ್ಳುವುದರೊಂದಿಗೆ ದೇಶದ ಪರ ತಮ್ಮ ಕರ್ತವ್ಯಗಳನ್ನು ನಿಭಾಯಿಸಲು ಕಟಿಬದ್ಧವಾಗಿರಬೇಕು ಎಂದು ಅವರು  ತಿಳಿಸಿದರು. 

ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಸರ್ಕಾರ, ಕಾನೂನುಗಳು ಸಂವಿಧಾನದ ಚೌಕಟ್ಟಿನಲ್ಲಿ ನಿರ್ಮಾಣವಾಗುತ್ತವೆ. ಇಲ್ಲಿ ಎಲ್ಲರೂ ಸಮಾನ, ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ನಮ್ಮ ಪ್ರಜಾಪ್ರಭುತ್ವದ ತತ್ವಗಳನ್ನು ಕೇವಲ ಒಂದೇ ದಿನಕ್ಕೆ ಸಿಮಿತಗೊಳಿಸಿದೆ ಪ್ರತಿದಿನವು ಚಾಚುತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು.  

ಪ್ರಜಾಪ್ರಭುತ್ವದ ಎಲ್ಲ ತತ್ವಗಳನ್ನು ನಾಗರಿಕರು ಅರ್ಥ ಮಾಡಿಕೊಳ್ಳಬೇಕು ಮತದಾನ ಪ್ರಜಾತಂತ್ರದ ಒಂದು ಭಾಗ. ನಮ್ಮ ದೇಶದಲ್ಲಿ ಮತದಾನದ ಹಕ್ಕು ಸಂವಿಧಾನದ ಜಾರಿಯಾದ ಪ್ರಾರಂಭದಲ್ಲಿಯೇ ಎಲ್ಲರಿಗೂ ದಕ್ಕಿದೆ, ಬೇರೆ ದೇಶಗಳ ಸಂವಿಧಾನ ತಿಳಿದುಕೊಂಡಾಗ ಮತದಾನ ಹಕ್ಕಿನ ಮಹತ್ವ ತಿಳಿದುಕೊಳ್ಳಬುದಾಗಿದೆ ಎಂದು ಅವರು ಹೇಳಿದರು.  

ಭಾರತವು ಅತ್ಯಂತ ಯಶಸ್ವಿನ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ಅನೇಕ ಗಣ್ಯರ ಪರಿಶ್ರಮದಿಂದ ರಚಿಸಿರುವ ಅಮೂಲ್ಯವಾದ ನಮ್ಮ ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು,  ಅದರ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳೋಣ ಎಂದು ಅವರು ಹೇಳಿದರು. 

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೊಸ್ಕರ ಇರುವ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಯಿಂದ ನಿನ್ನೆ ತೆರಳಿದ 10 ಬೈಕ್‌ಗಳ ರಾ​‍್ಯಲಿಯು ಇಂದು ಬೆಂಗಳೂರಿನ ವಿಧಾನ ಸಭೆಯಲ್ಲಿ ನಡೆಯುವ ರಾಜ್ಯಮಟ್ಟದ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿವೆ.  ಹಾಗೂ ಇಂದು ಬೆಳಿಗ್ಗೆ ಜಿಲ್ಲಾಮಟ್ಟದ ಆಯೋಜಿಸಿದ ಸೈಕಲ್ ರಾ​‍್ಯಲಿಯೂ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಹೇಳಿದ ಅವರು ಪ್ರಜಾಪ್ರಭುತ್ವದ ಅಂಗವಾಗಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳನ್ನು ಏರಿ​‍್ಡಸಲಾಗುತ್ತಿದೆ ಈ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಅವರು ಕರೆ ನೀಡಿದರು. 

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ, ಸಮಾನತೆಯ ಸಂದೇಶವನ್ನು ಸಾರಿದರು. ಜಗತ್ತಿನಾದ್ಯಂತ ಪ್ರಖ್ಯಾತಿ ಪಡೆದಿರುವ ಅನುಭವ ಮಂಟಪ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.  

ಪ್ರಜಾಪ್ರಭುತ್ವದಲ್ಲಿ ಸರ್ವೋಚ್ಚ ಅಧಿಕಾರಿ ಸಾರ್ವಜನಿಕರ ಕೈಯಲ್ಲಿರುತ್ತದೆ. ತಮ್ಮ ನಾಯಕರನ್ನು ಆಯ್ಕೆ ಮಾಡುವ ಸ್ವಾತಂತ್ರ ಸಾರ್ವಜನಿಕರಿಗೆ ಸಂವಿಧಾನ ನೀಡಿದೆ. ವಿಶ್ವದಲ್ಲಿ ಅತ್ಯಂತ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಗೆ ಪಾತ್ರವಾಗಿರುವ ನಮ್ಮ ಸಂವಿಧಾನದ ಪರ ನಮ್ಮ ಜವಾಬ್ದಾರಿಯನ್ನು ನಾವೇಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು. 

ಡಾ.ಮಂಜುನಾಥ ಕೋರಿ ಅವರು ಉಪನ್ಯಾಸ ನೀಡಿ, ದೇಶದ ಪ್ರಜಾಪ್ರಭುತ್ವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಸಾರ್ವಭೌಮ, ಸ್ವಾತಂತ್ರ, ಕಾನೂನು ಪ್ರಭುತ್ವ, ಬಹುಮತ ತತ್ವ, ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಂಶಗಳನ್ನು ಹೊಂದಿರುವ ಸಂವಿಧಾನದ ರಚನೆ ಮಾಡಿರುವ ಹಕ್ಕು ಮತ್ತು ಕರ್ತವ್ಯಗಳ ಸಮತೋಲನವನ್ನು ಸಂವಿಧಾನದಲ್ಲಿ ಸೇರಿಸುವುದರ ಮೂಲಕ ದೇಶದ ಪ್ರತಿ ಪ್ರಜೆಗೂ ದೇಶದ ಪರ ಕರ್ತವ್ಯಗಳನ್ನು ವಹಿಸಿದ್ದಾರೆ. ಎಲ್ಲರಿಗೂ ಹೊಂದಿಕೆಯಾಗುವಂತಹ ಸಂವಿಧಾನವನ್ನು ರಚಿಸಿ, ಸಂವಿಧಾನಕ್ಕೆ ಮತದಾನ ಎಂಬ ಜೀವಾಳ ತುಂಬಿದ ಕೀರ್ತಿ ಡಾ.ಬಿ.ಆರ್‌. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮತದಾನವು ಸಮಾನತೆಯ ಆಧಾರದ ಮೇಲೆ ಸರ್ವರಿಗು ಸಲ್ಲಿದ ಅವಕಾಶ. ಮತದಾರರು ಸರ್ಕಾರದ ನಿರ್ಣಯದಲ್ಲಿ ಮಹತ್ವದ ಪಾತ್ರ ನಿರ್ವಹಿಸುವರು ಎಂದು ಅವರು ಹೇಳಿದರು. ಮತದಾರರು ಉತ್ತಮ ನಾಯಕರ ಆಯ್ಕೆ ಮಾಡವ ಜವಾಬ್ದಾರಿ ಹೊಂದಿರುತ್ತಾರೆ ಮತದಾರರ ಮತವು ಭಾರತದ ಉಜ್ವಲ ಭವಿಷ್ಯದ ನಿರ್ಣಯ ಮಾಡುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿರುವ ಸುಶೀಲಾ ಕರ್ಕಿಯವರು ಭಾರತದ ಸಹಾಯದೊಂದಿಗೆ ಸಂಸತು ರಚಿಸುತ್ತೇವೆ ತಮ್ಮ ದೇಶದ ಹೊಸ ಸಂಸತಿಯ ಸರ್ಕಾರ ರಚಿಸುತ್ತೇವೆ ಎಂದು ಹೇಳಿದರುವುದು ನಮ್ಮ ಸಂವಿಧಾನದ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಂವಿದಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.  ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿದರು.  ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ ಇಂಡಿ ವಂದಿಸಿದರು. 

ಕಾರ್ಯಕ್ರಮದಲ್ಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ,  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ವೀರಯ್ಯ ಸಾಲಿಮಠ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ, ಮುಖಂಡರುಗಳಾದ ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ, ಸಿದ್ದು ರಾಯಣ್ಣವರ, ಅಭಿಷೇಕ ಚಕ್ರವರ್ತಿ, ಭೀಮರಾಯ ಜಿಗಜಿಣಗಿ, ಸಂತೋಷ ಶಹಾಪೂರ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಚೆನ್ನು ಕಟ್ಟಿಮಣಿ, ಮಲ್ಲಿಕಾರ್ಜುನ ಬಟಗಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.  

  

ಸೈಕಲ್ ಜಾಥಾ: ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಸೋಮವಾರ ಬೆಳಿಗ್ಗೆ ಆಯೋಜಿಸಿದ ಸೈಕಲ್ ಜಾಥಾಕ್ಕೆ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ ಅವರು ಗೋಲಗುಂಬಜ್ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಗೋಲಗುಂಬಜ್ ಆವರಣದಿಂದ ಪ್ರಾರಂಭಗೊಂಡ ಈ ಜಾಥಾವು ಕನಕದಾಸ ವೃತ್ತ, ಗಣಪತಿ ವೃತ್ತ, ಶ್ರೀ ಸಿದ್ದೇಶ್ವರ್ ದೇವಸ್ಥಾನ, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೀನಾಕ್ಷಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಬಸವೇಶ್ವರ ವೃತ್ತದಿಂದ, ಅಂಬೇಡ್ಕರ್ ವೃತ್ತದವರೆಗೆ ಸಮಾವೇಶಗೊಂಡಿತ್ತು. ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಸಿ.ಬಿ.ಕುಂಬಾರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.