ದದೇಗಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್.ಡಿ.ಆರ್.ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ
ಕೊಪ್ಪಳ 23: ಕೋಳೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (25.2.007) ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮವು ಗುರುವಾರ ದದೇಗಲ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಿತು.
ಎನ್.ಡಿ.ಆರ್.ಎಫ್ ತಂಡವು ಅತೀವೃಷ್ಟಿ, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಸಮುದಾಯ ಅಣುಕು ಪ್ರದರ್ಶನ (ಫೆಮೆಕ್ಸ್) ಕ್ರಮಗಳನ್ನು ಜರುಗಿಸಿತು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಆಗುವ ಅನಾಹುತಗಳು ಮತ್ತು ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಯಾವ ರೀತಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂಬುವುದರ ಬಗ್ಗೆ ಮತ್ತು ಭೂಕಂಪ ಬಂದಾಗ ಹೇಗೆ ರಕ್ಷಣೆ ಮಾಡಬೇಕು ಇತ್ಯಾದಿ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ನೀಡಿತು.
ಕಾರ್ಯಕ್ರಮದಲ್ಲಿ ಎನ್.ಡಿ.ಆರ್.ಎಫ್ ತಂಡದ ಎ.ಎಸ್.ಐ ಸೋಮಧೀರ್ ಕುಮಾರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕ ಮಹೇಶ್, ಶಿರಸ್ತೆದಾರ ಮಹಾವೀರ್, ಕೋಳೂರು ಗ್ರಾಮ ಪಂಚಾಯತಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಶೇಖರ ಮಡಿವಾಳರ, ಕಂದಾಯ ನೀರೀಕ್ಷಕ ಸುರೇಶ್, ಕಾಲೇಜಿನ ಪ್ರಾಚಾರ್ಯರರಾದ ಕೆ.ವೆಂಕಟೇಶ್‌ಮೂರ್ತಿ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಎನ್.ಡಿ.ಆರ್.ಎಫ್ ತಂಡದ ಸದಸ್ಯರಾದ ವಜ್ರ ಚೇತನ, ಗಂಗಾಧರ ಚಿಕ್ಕೊಡಿ, ಕರುಣಾಮೂರ್ತಿ, ಶಶಿಕಾಂತ, ಗಂಗಾಧರ ಶಂಕರ್ಪ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.