ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಬಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು-ಡಿ.ಎಚ್.ಒ ಡಾ.ರಾಜೇಶ ಸುರಗೀಹಳ್ಳಿ
ಹಾವೇರಿ 23: ಮಾನವ ತನ್ನ ದೇಹದ ಅಂಗಗಳಲ್ಲಿ ಅತೀ ಬಳಸುವ ಅಂಗ ಬಾಯಿ ಆಗಿದೆ. ಬಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ನಿರ್ಲಕ್ಷ್ಯ ಮಾಡಿದರೆ ದಂತಕ್ಷಯ, ವಸಡಿನ ಖಾಯಿಲೆಗಳು, ವಕ್ರದಂತ ಹಾಗೂ ಬಾಯಿ ಕ್ಯಾನ್ಸರ್ ನಂತಹ ಅನೇಕ ರೋಗಗಳು ಬರುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗೀಹಳ್ಳಿ
ದೇವಿಹೊಸೂರ ಪ್ರಾಥಮಿಕ ಆರೋಗ್ಯ ಕೇಂದ್ರ ಬುಧವಾರ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ದಾವಣಗೆರೆ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ್ರ್ರಥಮವಾಗಿ ಆಯೋಜಿಸಲಾದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
ಸರ್ಕಾರವು ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮವನ್ನು 2014ರ ಜನವರಿಯಲ್ಲಿ ಜಾರಿಗೆ ತಂದಿದೆ. ಈ ಕಾರ್ಯಕ್ರಮದಡಿ ಶಾಲಾ ಮಕ್ಕಳ ಬಾಯಿ ತಪಾಸಣೆ, ಬಾಯಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು ಹಾಗೂ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ದಂತ ಭಾಗ್ಯ ಯೋಜನೆ ಕುರಿತು ಅರಿವು ಮೂಡಿಸಲಾಗುತ್ತಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಂತ ವೈದ್ಯರು ಲಭ್ಯವಿರುವುದಿಲ್ಲ, ಬಾಯಿ ರೋಗಗಳ ಚಿಕಿತ್ಸೆಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಗಳಿಗೆ ರೋಗಿಗಳು ಹೋಗಬೇಕಾದ ಅನಿವಾರ್ಯತೆ ಇದೆ. ಈ ಸಮಸ್ಯಗೆ ಪರಿಹಾರವಾಗಿ ಹತ್ತಿರದ ದಂತ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿಯಮಿತವಾಗಿ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.
ಬಾಯಿ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಕಲ್ಪನಾ ಎಂ.ಎಸ್. ಅವರು ಪ್ರಸ್ತಾವಿಕವಾಗಿ ಮಾತನಾಡಿ, ಬಾಯಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಿದರು.
ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷಿ ಮುದಿಗೌಡರ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಎಸ್.ಕುಂದೂರ, ಆಡಳಿತ ವೈದ್ಯಾಧಿಕಾರಿ ಡಾ.ಸುಹೀಲ ಹರವಿ, ಡಾ.ವಿನಾಯಕ ಕೆ, ಡಾ. ಗಗನ ಮಾಳೋದೆ, ಡಾ. ಮಿಥುನ, ಡಾ. ಸುಶಾಂತ ಹಿರೇಮಠ ಹಾಗೂ ದಾವಣಗೆರೆ ಕಾಲೇಜ್ ಆಫ್ ಡೆಂಟಲ್ ಸೈನ್ಸ್‌ನ ದಂತ ವೈದ್ಯರು ಇತರರು ಉಪಸ್ಥಿತರಿದ್ದರು.