ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
Department of Information and Public Relations invites applications for Journalism Apprentice Train
ಧಾರವಾಡ ಡಿ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26 ನೇ ಸಾಲಿಗೆ ಧಾರವಾಡ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಯ ಒರ್ವ (01) ಮತ್ತು ಪರಿಶಿಷ್ಟ ಪಂಗಡದ ಒರ್ವ (01) ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಚೇರಿಯಲ್ಲಿ 12 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಒಳಗಿರಬೇಕು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಯಾವುದೇ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಎದುರಿಗೆ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 23, 2025 ರೊಳಗೆ ಈ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರನ್ನು ಅಥವಾ ಸಹಾಯಕ ನಿರ್ದೇಶಕರು (ಪ್ರ) ಮೊ.ನಂ. 9538076619 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 