ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ದಿಢೀರ ಭೇಟಿ : ಪರೀಶೀಲನೆ

ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ದಿಢೀರ ಭೇಟಿ : ಪರೀಶೀಲನೆ Deputy Commissioner Dr. Ananda K.'s sudden visit to Chadchana taluk: Review


ವಿಜಯಪುರ,ಜ.28: ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ದಿಢೀರವಾಗಿ ಚಡಚಣ ತಾಲೂಕಿನ ವಿವಿಧ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯಲ್ಲಿನ ಕಾರ್ಯವ್ಯವಸ್ಥೆ ಕುರಿತು ಪರೀಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. 

ಚಡಚಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ​‍್ಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರೀಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು. ಈ ಕುರಿತು ಸರಕಾರಕ್ಕೆ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಹೇಳಿದರು. 

ಬಿಸಿಎಂ ಹಾಸ್ಟೇಲ್‌ಗೆ ಭೇಟಿ ನೀಡಿ ವಸತಿ ನಿಲಯದಲ್ಲಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ನಿಗದಿತ ಆಹಾರ ಪೂರೈಕೆ, ಅಗತ್ಯ ಸೌಲಭ್ಯ ಒದಗಿಸುತ್ತಿರುವ ಕುರಿತು ಮಕ್ಕಳ ಪಾಲಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು,  ಮಕ್ಕಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ​‍್ಕವಾಗಿ ವಸತಿ ನಿಲಯ ನಿರ್ವಹಣೆ ಮಾಡುವಂತೆ ಅವರು ಸೂಚನೆ ನೀಡಿದರು.  

ಚಡಚಣ ತಾಲೂಕಾ ಕಚೇರಿಯಲ್ಲಿ ಭೂಮಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹಕ್ಕು ಬದಲಾವಣೆ, ಜೆ ನಮೂನೆಗಳು 8ದಿನಗಳಲ್ಲಿ ಮತ್ತು ನೋಟಿಸ್ ರಹಿತ ಹಕ್ಕು ಬದಲಾವಣೆಗಳು 3 ದಿನಗಳಲ್ಲಿ ಹಾಗೂ ಪೌತಿ  ಖಾತೆಗಳು, ಇ-ಪೌತಿ ತಂತ್ರಾಂಶದಲ್ಲಿ ಅಳವಡಿಸಲಾಗಿರುವ ಕುರಿತು ಶಿರಸ್ತೇದಾರ ಆರ್‌.ಎಸ್‌.ಚವ್ಹಾಣ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.  

ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಮಕ್ಕಳಿಗೆ ಪೌಷ್ಠಿಕ ಆಹಾರ ಸಮರ​‍್ಕವಾಗಿ ಪೂರೈಕೆ ಮಾಡಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.  

ನಂತರ ತಾಲೂಕಾ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಕಚೇರಿಯ ಸಿಬ್ಬಂದಿ, ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಿಕೊಡಬೇಕು. ನಿಗದಿತ ಅವಧಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಸಕಾಲದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ವಿವಿಧ ಸಾರ್ವಜನಿಕರು ತಮ್ಮ ಮನವಿಗಳನ್ನು ಸಲ್ಲಿಸಿ, ತದೇವಾಡಿ ಗ್ರಾಮದ ಜಮೀನಿನ ಪಹಣಿ ದೋಷ ಸರಿಪಡಿಸುವುದು, ಚಡಚಣ ಪಟ್ಟಣದ ಸುತ್ತಮುತ್ತ ಗ್ರಾಮಗಳಲ್ಲಿ ಅನಧಿಕೃತವಾಗಿ ಸಾರಾಯಿ ಮಾರಾಟಕ್ಕೆ ಕಡಿವಾಣಕ್ಕೆ ಮನವಿ ಸಲ್ಲಿಸಲಾಯಿತು. ಈ ಕುರಿತು ಜಿಲ್ಲಾಧಿಕಾರಿಗಳು  ಉಪವಿಭಾಗಾದಿಕಾರಿಗಳಿಗೆ ಸೂಚನೆ ನೀಡಿ, ಅಬಕಾರಿ-ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.  

ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.