ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಭೇಟಿ-ಪರೀಶೀಲನೆ
Deputy Commissioner Dr. Ananda K. visits and inspects various taluka offices in Nidagundi
ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಭೇಟಿ-ಪರೀಶೀಲನೆ
ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರೀಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು.ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ ನಿಗದಿತ ಸಮಯದಲ್ಲಿ ವಿಲೆಗೆ ಕ್ರಮ ವಹಿಸಬೇಕು. ಕಚೇರಿ, ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ತಹಶೀಲ್ದಾರ ಕಚೇರಿ ಎದುರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ,ನ್ಯಾಯ ಬೆಲೆ ಅಂಗಡಿಯಲ್ಲಿ ಸ್ಟಾಕ್ ರಜಿಸ್ಟರ್ ನಿರ್ವಹಣೆ ಮಾಡಬೇಕು. ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಆಹಾರ ಧಾನ್ಯಗಳನ್ನು ಎಲ್ಲ ಪಡಿತರ ಚೀಟಿದಾರರಿಗೆ ಹಂಚುವಂತೆ ಅವರು ಸೂಚನೆ ನೀಡಿದರು.
ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ನಗರದಾದ್ಯಂತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸ ಕಂಡಲ್ಲಿ ಫೋಟೋ ಕಳುಹಿಸಿ ಅಭಿಯಾನವನ್ನು ಸಮರ್ಕವಾಗಿ ಜಾರಿಗೊಳಿಸಿ ಕಸಮುಕ್ತವಾಗಿಸಲು ಕ್ರಮ ವಹಿಸಬೇಕು. ಕಸ ವಿಲೇವಾರಿ ಘಟಕ ಸ್ಥಾಪನೆಗೆ ಗುರುತಿಸಲಾದ ಸ್ಥಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ ಓಷಧ ವಿತರಣೆ ಕೌಂಟರ್ ಸೇರಿದಂತೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಪರೀಶೀಲನೆ ನಡೆಸಿದ ಅವರು, ಮಕ್ಕಳು, ಗರ್ಭೀಣಿಯರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ ಅವರು, ಡಯಾಬಿಟಿಸ್ ಕೇಂದ್ರವನ್ನು ಪರೀಶೀಲನೆ ನಡೆಸಿದರು.
ಆಲಮಟಿಯ ಮರಿಮಟ್ಟಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಚಿತ್ರಾನ್ನ-ಮೊಟ್ಟೆಯನ್ನು ಸ್ವತ: ಜಿಲ್ಲಾಧಿಕಾರಿಗಳು ಸೇವಿಸಿ ಆಹಾರ ಗುಣಮಟ್ಟವನ್ನು ಪರೀಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅವರು ಸೂಚನೆ ನೀಡಿ, ನಂತರ ಆಲಮಟ್ಟಿ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಸಕಾಲಕ್ಕೆ ಮಾಹಿತಿ ನೀಡಬೇಕು. ಕೇಂದ್ರದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಿಡಗುಂದಿ ತಹಶೀಲ್ದಾರ ಎ.ಡಿ.ಅಮರಾವದಗಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರತಾಪ ಕೊಡಗೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ವೈದ್ಯಾಧಿಕಾರಿ ಪ್ರಕಾಶ ನಾಟೀಕಾರ, ಆಹಾರ ನೀರೀಕ್ಷಕ ಗುತ್ತರಗಿ, ಕಂದಾಯ ನೀರೀಕ್ಷಕ ಸಲೀಮ ಯಲಗೋಡ, ಗ್ರಾಮಾಡಳಿತಾಧಿಕಾರಿ ನಾನಾಗೌಡ ಪಾಟೀಲ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 