ಜಿಲ್ಲಾಧಿಕಾರಿ ಡಾ.ಆನಂದ ಕೆ.ನಗರದ ವಿವಿಧೆಡೆ ಭೇಟಿ : ಪರೀಶೀಲನೆ
Deputy Commissioner Dr. Ananda K. visits various places in the city: Review
ಜಿಲ್ಲಾಧಿಕಾರಿ ಡಾ.ಆನಂದ ಕೆ.ನಗರದ ವಿವಿಧೆಡೆ ಭೇಟಿ : ಪರೀಶೀಲನೆ
ವಿಜಯಪುರ 07: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋಟೆಗೋಡೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡುವಂತೆ ಸೂಚಿಸಿದ ಅವರು, ಐತಿಹಾಸಿಕ ವಿಜಯಪುರ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದರಿಂದ ನಗರದಾದ್ಯಂತೆ ಸ್ವಚ್ಛತೆಗೆ ಆದ್ಯತೆ ನೀಡಿ, ಅವಶ್ಯಕತೆ ಇದ್ದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಳೆ ನೀರು ಒಂದೆಡೆ ನಿಂತು ಪ್ರವಾಹ ಪರಿಸ್ಥಿತಿಯಾಗದಂತೆ ನೋಡಿಕೊಳ್ಳಲು ಅವಶ್ಯಕವಿದ್ದೆಡೆ ಮಳೆ ನೀರು ಚರಂಡಿ ನಿರ್ಮಿಸಲು ಯೋಜನೆ ರೂಪಿಸಿ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸೂಕ್ತ ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರದ ಇಂಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಕಾರ್ಯನಿರ್ವಾಹಕ ಅಭಿಯಂತರ ವಿಠ್ಠಲ ಹೊನ್ನಳ್ಳಿ, ಆರೋಗ್ಯಾಧಿಕಾರಿ ಎಸ್.ಎಲ್.ಲಕ್ಕಣ್ಣವರ ಸೇರಿದಂತೆ ಪಾಲಿಕೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 