ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪ ಲೋಕಾಯುಕ್ತ ನ್ಯಾ. ಬಿ.ವೀರ್ಪ ಅನೀರೀಕ್ಷಿತ ಭೇಟಿ ಪರೀಶೀಲನೆ
ಬಳ್ಳಾರಿ 17:ನಗರದ ಬಂಡಿಮೋಟ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರಕ್ಕೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರ್ಪ ಅವರು ಶುಕ್ರವಾರ ಅನೀರೀಕ್ಷಿತ ಭೇಟಿ ನೀಡಿ ಆಹಾರ ಧಾನ್ಯಗಳನ್ನು ವೀಕ್ಷಿಸಿದರು.
ಉಗ್ರಾಣದಲ್ಲಿ ಸ್ವಚ್ಛತೆ ಹಾಗೂ ಸರಿಯಾದ ನಿರ್ವಹಣೆ ಮಾಡದೇ ಇರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಉಗ್ರಾಣದಲ್ಲಿ ಸುಮಾರು 48 ಸಾವಿರ ಜೋಳದ ಚೀಲಗಳು(24 ಸಾವಿರ ಕ್ವಿಂಟಾಲ್) ಹುಳ ತುಂಬಿಕೊಂಡು, ಪುಡಿಗಟ್ಟಿರುವುದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಡಜನರು ಸೇವಿಸುವ ಆಹಾರವು ನಷ್ಟಗೊಳ್ಳುತ್ತಿರುವುದಕ್ಕೆ ಸ್ವಯಂ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರದ ಅಧಿಕಾರಿ ಶರಾವತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ತಹಶೀಲ್ದಾರ ಗುರುರಾಜ ಸೇರಿದಂತೆ ಇತರರು ಇದ್ದರು.