ಫೇಸ್ಬುಕ್‌ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನ
Derogatory post against CM on Facebook: Person arrested
ಫೇಸ್ಬುಕ್‌ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನ
ದೇವರಹಿಪ್ಪರಗಿ 16: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ದೇವರಹಿಪ್ಪರಗಿ ಪೋಲಿಸ್ ಠಾಣೆ ವ್ಯಾಪ್ತಿಯ ಬೋರಗಿ ಗ್ರಾಮದಲ್ಲಿ ನಡೆದಿದೆ.
ರವಿವಾರದಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಪರಿಣಾಮ ಈರಣ್ಣ ರಟ್ಕಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೆ ಬಂಧಿಸಬೇಕು ಎಂದು ಟಯರಿಗೆ ಬೆಂಕಿ ಹಚ್ಚಿ ಸಿಎಂ ಅಭಿಮಾನಿಗಳು ಆಗ್ರಹಿಸಿದ್ದರು.
ಪಟ್ಟಣದ ಸಮೀಪವಿರುವ ಬೋರಗಿ ಗ್ರಾಮದ ಈರಣ್ಣ ರಟ್ಕಲ್ ಎಂಬಾತನನ್ನು ಪೊಲೀಸರು ಬಂಧಿಸಿ ಸ್ವಯಂ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಈತನ ಫೇಸ್ಬುಕ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಯುಂಟಾಗುವ ರೀತಿಯಲ್ಲಿ ಅವರ ಚಿತ್ರ ಬರಹ ಬರೆದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿರುವುದರ ವಿರುದ್ಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 