ದಲಿತ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೆ; ಕ್ರಮಕ್ಕೆ ಆಗ್ರಹ
Derogatory remarks against Dalit leaders condemned; action demanded
ಕಾಗವಾಡ 2: ರಾಜ್ಯ ಸಚಿವರು ಹಾಗೂ ದಲಿತ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಸತೀಶ ಜಾರಕಿಹೊಳಿ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವುದನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.
ಪಟ್ಟಣದಲ್ಲಿ ಗುರುವಾರ ದಲಿತ ಸಂಘರ್ಷ ಸಮಿತಿ ಕಾಗವಾಡ ಘಟಕದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಸಂಜಯ ತಳವಳ್ಕರ್, ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ರೀತಿಯ ಘಟನೆಗಳು ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಅಮೀನ್ ಜಾತಗಾರ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡ ರವಿ ಕಾಂಬಳೆ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ ಇನ್ನಷ್ಟು ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಕಾಗವಾಡ ಶಾಸಕ ರಾಜು ಕಾಗೆ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದರು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ರವೀಂದ್ರ ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಚೇಂದ್ರ ಕಾಡಾಪುರೆ, ಸಚಿನ್ ಪೂಜಾರಿ, ಉದಯ ಖೋಡೆ, ತಿಪ್ಪಣ್ಣ ಭಜಂತ್ರಿ, ಕುಮಾರ ಬನಸೋಡೆ, ಉಮೇಶ್ ಮನೋಜ್, ಹನುಮಂತ ಮಧಾಳೆ, ಮಹಾಂತೇಶ ಬಡಿಗೇರ, ರವಿ ಕುರಣಿ, ಪ್ರಕಾಶ ಧೋಂಡಾರೆ, ಪೋಪಟ್ ಕಾಂಬಳೆ, ಈಶ್ವರ ಕಾಂಬಳೆ, ಮಲ್ಲಿಕಾರ್ಜುನ ಕಾಂಬಳೆ, ವಿಶಾಲ್ ಧೋಂಡಾರೆ, ಜನಾರ್ದನ ಧೋಂಡಾರೆ, ಶಿಲಾದಾರ ಚೌಹಾಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 