ನಾಳೆ ದಿನಾಂಕ 01.01.2026 ರಂದು ಶ್ರೀ ಗವಿಮಠದಲ್ಲಿ ಜರುಗುವ ಕಾರ್ಯಕ್ರಮಗಳ ವಿವರ

ನಾಳೆ ದಿನಾಂಕ 01.01.2026 ರಂದು ಶ್ರೀ ಗವಿಮಠದಲ್ಲಿ ಜರುಗುವ ಕಾರ್ಯಕ್ರಮಗಳ ವಿವರ Details of the programs to be held at Sri Gavi Math tomorrow, 01.01.2026

               ಕೊಪ್ಪಳ 31: ದಿನಾಂಕ 01-01-2026, ಗುರುವಾರ, ಮಧ್ಯಾಹ್ನ 2;00 ಗಂಟೆಗೆ ಬಸವ ಪಟ ಕಾರ್ಯಕ್ರಮದಿನಾಂಕ 01-01-2026, ಗುರುವಾರ, ಮಧ್ಯಾಹ್ನ 2;00 ಗಂಟೆಗೆ ಬಸವ ಪಟ ಕಾರ್ಯಕ್ರಮ ಶ್ರೀ ಗವಿಸಿದ್ಧೇಶ್ವರ ಕರ್ತೃ ಗದ್ದುಗೆ ಹತ್ತಿರ ನಾಳೆ ಜರುಗಲಿದೆ.  ಈ ಕಾರ್ಯಕ್ರಮವು ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವದ ಮುನ್ನಾ ದಿನ ‘ಬಸವಪಟ ಆರೋಹಣ’ ಎಂಬ ಧಾರ್ಮಿಕ ಕಾರ್ಯಕ್ರಮವೂ ಜರುಗುತ್ತದೆ. ಭಕ್ತರು ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪ್ರಣವ ಮಂತ್ರವಿರುವ ಬಸವಪಟಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿ, ನೈವೇದ್ಯ ಮಾಡಿ ಆ ಬಳಿಕ ಅದನ್ನು ಶ್ರದ್ಧೆಯಿಂದ ತಲೆಯ ಮೇಲೆ ಹೊತ್ತುಕೊಂಡು ಶ್ರೀ ಗವಿಮಠದ ಕರ್ತೃ ಗದ್ದುಗೆಯ ಸುತ್ತ ಐದು ಸಾರಿ  ಪ್ರದಕ್ಷಿಣೆ- ಹಾಕುತ್ತಾ ಗವಿಸಿದ್ಧೇಶ್ವರನ ಜಯಘೋಷಗಳೊಂದಿಗೆ ಕರ್ತೃ ಗದ್ದುಗೆಯ ಮುಂಭಾಗದ ಎದುರಿಗಿರುವ ಶಿಲಾಸ್ತಂಭಕ್ಕೆ ಬಸವ ಪಟವನ್ನು ಆರೋಹಣಗೊಳಿಸುವುದು.

            ಇದುವೇ ‘ಬಸವಪಟ ಆರೋಹಣ’.ಬಸವ ಪಟ ಆರೋಹಣ ಮಾಡುವ ಉದ್ದೇಶ: ನಮ್ಮದು ಕೃಷಿ ಪ್ರಧಾನ ನಾಡು.ಆ ಕಾರಣಕ್ಕಾಗಿ ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪೃಕೃತಿ ಇವುಗಳಿಗೆ ಪೂಜೆ ಸಲ್ಲಿಸುವದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಶ್ರೀ ಗವಿಸಿದ್ಧನ ಸನ್ನಿಧಿಯ ಈ ನಾಡಿನಲ್ಲಿ ಸದಾಕಾಲ ಉತ್ತಮ ಮಳೆ, ಉತ್ತಮ ಬೆಳೆ ಬಂದು ರೈತಾಪಿ ವರ್ಗಕ್ಕೆ ಸುಖ, ಶಾಂತಿ, ಸಮೃದ್ಧಿ ಸದಾ ದೊರೆಯಲೆಂಬ ಆಶಯಕ್ಕಾಗಿ ‘ಬಸವಪಟ ಆರೋಹಣ’ ಕಾರ್ಯಕ್ರಮವು ಜರುಗುತ್ತದೆ. ಶ್ರೀಮಠದ ಜಾತ್ರಾ ಪರಂಪರೆಯಲ್ಲಿ ಬಸವಪಟ ಆರೋಹಣ ಕಾರ್ಯಕ್ರಮದ ಮೂಲಕವೇ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಂತಾಗುತ್ತದೆ. ಹಾಗೆಯೇ ಆಗಮಿಸಿದ ಶಿವಯೋಗಿಗಳಿಗೆ ಹಾಗೂ ಜಂಗಮ ಪುಂಗವರಿಗೆ ಪ್ರಸಾದ ಸೇವಾ ಕಾರ್ಯವು ಸಹ ಅನುಚಾನವಾಗಿ ನಡೆದುಬಂದಿದೆ.ಹೆಚ್ಚಿನ ಮಾಹಿತಿಗಾಗಿ ಈ ಮೋಬೈಲ್ 8123932545 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.