ವಿದ್ಯಾರ್ಥಿಗಳಲ್ಲಿ ಆಧುನಿಕ ಕಲಿಕಾ ಸಾಮರ್ಥ್ಯವನ್ನು ಬೆಳೆಸಿಕೊಳ್ಳಿ: ಮನಗೂಳಿ
Develop modern learning skills in students: Managuli
ಸಿಂದಗಿ 20: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಬೇರೆ ಬೇರೆ ವಿಶ್ವವಿದ್ಯಾಲಯಗಳಿಂದ ಮತ್ತು ಕಾಲೇಜುಗಳಿಂದ ನೂರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ ವಿಚಾರ ಸಂಕೀರ್ಣ, ಒಂದು ದಿನದ ಕಾರ್ಯಗಾರಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಆಧುನಿಕ ಕಲಿಕಾ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲ್ಲಿ ಕೀರ್ತಿ, ಸಂಪತ್ತು ಎಲ್ಲವೂ ದೊರೆಯುತ್ತದೆ, ವಿದ್ಯಾರ್ಥಿಗಳಲ್ಲಿ ಇಂತಹ ಕಲಿಕಾ ಆಸಕ್ತಿಗಳನ್ನು ಶಾಲಾ ಕಾಲೇಜುಗಳು ಬೆಳೆಸಬೇಕಿದೆ. ಕಾಲೇಜಿನ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಶ್ರಮಿಸುವೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಪ್ರಭುಲಿಂಗ ಲೋಣಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಬಸವರಾಜ ಈಳಗೇರ, ಮೈಹಿಬೂಬ ಹಸರಗುಂಡಗಿ, ಶಿವಾನಂದ ಗಣಿಹಾರ, ಪ್ರಾಚಾರ್ಯ ಎಸ್.ಎಸ್.ಹಳೇಮನಿ ದೈಹಿಕ ಶಿಕ್ಷಣ ಪ್ರಾಧ್ಯಾಪಕ ನಿರ್ದೇಶಕ ಡಾ.ರಾಜಶೇಖರ ಬೆನಕನಹಳ್ಳಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 