ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ: ಪಾಟೀಲ
Development is possible if you work honestly: Patil
ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ: ಪಾಟೀಲ
ಇಂಡಿ 13: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರ. ತಾಲೂಕು ಶಾಖೆ ಇಂಡಿ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಾಹಾಸಭೆ ಹಾಗೂ ಅನುಪಮ ಸೇವಾ ಪ್ರಶಸ್ತಿ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಇಂಡಿ ಮತಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರವಾಗಿದೆ, ಸಂವಿಧಾನದಲ್ಲಿ ನಾಲ್ಕು ಅಂಗಗಳು ಇವೆ, ಶಾಸಕಾಂಗ ನ್ಯಾಯಾಂಗ ಕಾರ್ಯಾಂಗ ಪತ್ರಿಕಾ ರಂಗಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಈ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು. ಸಾರ್ವಜನಿಕ ರಂಗದಲ್ಲಿ ಕೆಲಸ ಮಾಡುವ ನಾವು ಆತ್ಮವಿಶ್ವಾಸದಿಂದ ಕೆಲಸ ಮಾಡುವುದರ ಮೂಲಕ ಜನರ ಮನಸ್ಸು ಗೆಲ್ಲಬೇಕು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿಜಯಪೂರ ಜಿಲ್ಲಾ ಅಧ್ಯಕ್ಷರಾದ ಸುರೇಶ ಶೇಡಶ್ಯಾಳ ಅವರು ಮಾತನಾಡಿ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಮಾಡಿದಿರಿ ಇಂಡಿ ತಾಲೂಕು ಲಚ್ಯಾಣ ಸಿದ್ದಲಿಂಗ ಮಹಾರಾಜ ಹುಟ್ಟಿದ ಪುಣ್ಯ ಕ್ಷೇತ್ರವಾಗಿದೆ ವಿಜಯಪೂರ ಜಿಲ್ಲೆಯಲ್ಲಿ ಇಂಡಿ ತಾಲೂಕು ನೌಕರರ ಸಂಘ ಮಾದರಿ ಸಂಘವಾಗಿದೆ ಎಂದು ಹೇಳಿದರು.ಇಂಡಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ರಾವೂರ ಅವರು ಮಾತನಾಡಿ ನಾನು ಸಂಘದ ಅಧ್ಯಕ್ಷನಾಗಿ ನನ್ನ ಅವಧಿಯಲ್ಲಿ ಸುಮಾರು ಐವತ್ತು ಲಕ್ಷರೂಪಾಯಿ ವೆಚ್ಚದಲ್ಲಿ ನೌಕರ ಭವನ ಹಾಗೂ ಮಳಿಗೆಗಳನ್ನು ನಿರ್ಮಿಸಲಾಗಿದೆ ಈ ನಮ್ಮ ಸಂಘಕ್ಕೆ ಪ್ರತಿ ತಿಂಗಳು ನಲವತ್ತು ಸಾವಿರ ರೂಪಾಯಿ ಆದಾಯ ಬರುತ್ತಿದೆ ಇದು ಹೆಮ್ಮೆಯ ವಿಷಯ ಎಂದರು.ಡಾ.ಲಕ್ಷ್ಮೀಕಾಂತ ಮೇತ್ರಿ ಅವರು ಮಾತನಾಡಿ ನಮ್ಮ ಸ್ಷಂದನಾ ಆಸ್ಪತ್ರೆಯಲ್ಲಿ ಉಚಿತವಾಗಿ ಇಸಿಜಿ ಹಾಗೂ ಬಿಪಿ ಸೇವೆ ಇದ್ದು ಇದರ ಸೌಲ್ಯವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬೀಮಾಶಂಕರ ಕನ್ನೂರ ಲಕ್ಷ್ಮೀಕಾಂತ ಮೇತ್ರಿ ವಿಜಯಕುಮಾರ ಹತ್ತಿ ಶಿವಾನಂದ ಮಂಗನವರ ಶರಣಗೌಡ ಪಾಟೀಲ ಎಸ್ ಆರ್ ನಡಗಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ಅಧಿಕಾರಿ ಧನರಾಜ್ ಮುಜಗೊಂಡ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 