ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ ್ಲ: ಭರತ್ ಬೊಮ್ಮಾಯಿ
ಶಿಗ್ಗಾವಿ 07 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26 ನೇ ಸಾಲಿನ ಬಜೆಟ್ ನಲ್ಲಿ ಅಭಿವೃದ್ಧಿಗೆ ಯಾವುದೇ ರೀತಿಯ ಆದ್ಯತೆ ನೀಡಿಲ್ಲ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಏನೂ ಹೊಸತನ ಕಾಣಿಸುತ್ತಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು ಮತ್ತು ಕೇಂದ್ರದಿಂದ ಬರುವ ಅನುದಾನವನ್ನೇ ರಾಜ್ಯ ಸರ್ಕಾರದ ಯೋಜನೆಗಳು ಎಂದು ಬಿಂಬಿಸಲಾಗಿದೆ. ಇದು ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಬಲವಾಗಿರುವುದನ್ನು ತೋರಿಸುತ್ತದೆ. ಅಲ್ಲದೆ ತೋರಿಸಲು ಸರ್ಕಾರದ ಬಳಿ ಏನೂ ಇಲ್ಲ ಎಂದು ಹೇಳಿದ್ದಾರೆ.