ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ-ಪಟೇಲ್
Development of all sectors lies in the field of education - Patel
ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ-ಪಟೇಲ್
ಕೊಪ್ಪಳ 03: ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಬೇಕೆಂದರೆ ಮೊದಲು ನಾವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದ ಬೇಕು ಅಂದಾಗ ಮಾತ್ರ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ,ಎಲ್ಲಾ ಕ್ಷೇತ್ರದ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಅಭಿಪ್ರಾಯ ಪಟ್ಟರು, ಅವರು ನಿನ್ನೆ ನಗರದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಮಕ್ಕಳ ಮುಂದಿನ ಭವಿಷ್ಯ ಉಜ್ವಲ ಗೊಳ್ಳಲು ಅವರಿಗೆ ಗುಣಮಟ್ಟದ ಶಿಕ್ಷಣ ಅವಶ್ಯಕವಾಗಿದೆ ಈ ದಿಶೆಯಲ್ಲಿ ಶಿಕ್ಷಕರು ಅತ್ಯಂತ ಕಾಳಜಿ ವಹಿಸಿ ತಮ್ಮ ಜವಾಬ್ದಾರಿ ನಿಭಾಯಿಸಬೇಕು, ಪಾಲಕರು ಕೂಡ ಶಿಕ್ಷಕರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ, ನಮ್ಮ ಶಾಸಕ ಕೇರ್ ಆಗುವಂತೆ ರವರು ಶೈಕ್ಷಣಿಕ ಬೆಳವಣಿಗೆಗಾಗಿ ಸಾಕಷ್ಟು ಅನುದಾನವನ್ನು ಸರ್ಕಾರದಿಂದ ದೊರಕಿಸಿ ಕೊಟ್ಟಿದ್ದಾರೆ ಎಲ್ಲರೂ ಸೇರಿ ಶೈಕ್ಷಣಿಕ ಬೆಳವಣಿಗೆಗಾಗಿ ಶ್ರಮಿಸೋಣ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ತಿಳಿಸಿದರು, ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಶಂಕ್ರಯ್ಯ ವಹಿಸಿದ್ದರು, ವೇದಿಕೆ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಯೋಜಕರು ಸಹ ಶಿಕ್ಷಕರು ಮತ್ತು ಶಾಲೆಯ ಮುಖ್ಯ ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು ,ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿ ಜನ ಮನರಂಜಿಸಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 