ವಿಕಲಚೇತನರು ಮುಖ್ಯವಾಹಿನಿಗೆ ಬರುವುದೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶ: ಜಿಲ್ಲಾ ನಿರ್ದೇಶಕ ಆಚಾರ್ಯ

ಲೋಕದರ್ಶನ ವರದಿ

ಶಿರಹಟ್ಟಿ  25: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ಉನ್ನತ ಸ್ಥಾನದಲ್ಲಿ ಬರಬೇಕು ಎನ್ನುವುದು ಎಲ್ಲರ ಆಶಯವಾಗಿದೆ, ಅದರಲ್ಲಿ ಮುಖ್ಯವಾಗಿ ಗ್ರಾಮೀಣ ಮಟ್ಟದಲ್ಲಿ ವಾಸಿಸುವ ವಿಕಲಚೇತನರಿಗೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿ ಅವರನ್ನೂ ಸಹ ಮುಖ್ಯ ವಾಹಿನಿಗೆ ತರಬೇಕೆಂದು ನಮ್ಮ ಸಂಸ್ಥೆಯು ಶ್ರಮಿಸುತ್ತಿದೆ ಎಂದು ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ ಕರೆ ನೀಡಿದರು.

ಅವರು ಪಟ್ಟಣದ ರಾಘವೇಂದ್ರ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶಿಷ್ಠಚೇತನರಿಗೆ ಉಚಿತವಾಗಿ ಸಾಧನ ಸಲಕರಣೆ ವಿತರಣೆ ಮಾಡಿ ಮಾತನಾಡುತ್ತಾ, ಇಂದಿನ ದಿನಮಾನಗಳಲ್ಲಿ ಸಾಕಷ್ಟು ಜನ ವಿಕಲಚೇತನರು ತಮಗೆ ಲಭ್ಯವಿರುವ ಸಕರ್ಾರದ ಅಡಿಯಲ್ಲಿ ದೊರಕುವಂತಹ ಸಾಧನ ಸಲಕರಣೆಗಳ ಮಾಹಿತಿ ಇಲ್ಲದೇ ಪರದಾಡುವ ಪರಿಸ್ಥಿತಿಯಲ್ಲಿರುವ ವಿಕಲಚೇತನರನ್ನು ನಮ್ಮ ಗ್ರಾಮಾಭಿವೃದ್ಧಿ ಸಂಸ್ಥೆಯು ನಮ್ಮ ಕ್ಷೇತ್ರದಡಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತರ ನೆರವಿನಿಂದ ಅಂಥಹರನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಸಾಧನ ಸಲಕರಣೆಗಳನ್ನು ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವುದನ್ನು ನೋಡಿದರೆ ನಿಜವಾಗಿ ಅವರ ಪಾಲಿಗೆ ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥನೇ ಇಲ್ಲಿ ಬಂದು ಅವರಿಗೆ ಸಹಾಯ ಮಾಡುತ್ತಿದ್ದಾನೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಹಾಂತೇಶ ದಶಮನಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಶಿರಹಟ್ಟಿ ಯೋಜನೆಯ ಶಿವಣ್ಣ ಎಸ್, ಎಚ್ ಎಂ ಪಾಟೀಲ್, ವಿನಾಯಕ್ ಜೋಷಿ, ವೀಣಾ ಮೂರಶಿಳ್ಳಿ ಹಾಗೂ ಗ್ರಾಮಾಭಿವೃದ್ಧಿ ಸಂಸ್ಥೆಯ ನೂರಾರು ಸದಸ್ಯರು ಉಪಸ್ಥಿತರಿದ್ದರು