ರಾಯಬಾಗ 28: ಧರ್ಮಸ್ಥಳ ಧಮರ್ಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಮಾತೋಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹೆಮ್ಮೆರವಾಗಿ ಬೆಳೆದು ಬಡಹೆಣ್ಣು ಮಕ್ಕಳ ಬದುಕಿಗೆ ಆಶಾಕಿರಣವಾಗಿರುವ ಧರ್ಮಸ್ಥಳ ಸಂಘ ಇನ್ನು ಹೆಚ್ಚು ಬೆಳೆಯಲಿ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶುಕ್ರವಾರ ಪಟ್ಟಣದ ಮಹಾದೇವ ಮಂಗಲ ಕಾಯರ್ಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ರಾಯಬಾಗ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಧಮರ್ಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮೂಹಿಕ ಸತ್ಯನಾರಾಯಣ ಪೂಜೆ, ಮದ್ಯವರ್ಜನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಒಳ್ಳೆಯ ವಾತಾವರಣ ನಿಮರ್ಿಸುವಲ್ಲಿ ಧರ್ಮಸ್ಥಳ ಯೋಜನೆಯವರು ಹೆಜ್ಜೆ ಇಟ್ಟಿದ್ದಾರೆ ಎಂದರು.
ಸಾನಿಧ್ಯ ವಹಿಸಿದ್ದ ಪರಮಾನಂದವಾಡಿ ಗುರುದೇವಬ್ರಹ್ಮಾನಂದ ಆಶ್ರಮದ ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜಿ ಆಶೀರ್ವಚನ ನೀಡಿ, ಸರಕಾರ ಮಾಡದ ಕಾರ್ಯವನ್ನು ಧರ್ಮಸ್ಥಳ ಸಂಘ ಮಾಡುತ್ತಿರುವುದು ನಿಜಕ್ಕೂ ಅತ್ಯಂತ ಶ್ಲಾಘನೀಯ. ಸಂಘವು ಗ್ರಾಮೀಣ ಭಾಗದಲ್ಲಿ ಸ್ತ್ರೀ ಶಕ್ತಿ ಸಂಘಳನ್ನು ಸಂಘಟಿಸಿ, ಅವರು ಆಥರ್ಿಕವಾಗಿ ಸದೃಢರಾಗಲು ಸಹಾಯ ಹಸ್ತ ಚಾಚಿದೆ. ಜೊತೆಗೆ ಗ್ರಾಮಗಳನ್ನು ಅಭಿವೃದ್ಧಿ ಮಾಡುವಲ್ಲಿ ಕಾರ್ಯನಿರತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳೆಯರು ತಮ್ಮ ಮಕ್ಕಳಿಗೆ ಒಳ್ಳೆ ಶಿಕ್ಷಣ, ಸಂಸ್ಕೃತಿ ಜೊತೆಗೆ ಜವಾಬ್ದಾರಿಯನ್ನು ಚಿಕ್ಕ ವಯಸ್ಸಿನಲ್ಲಿಯೇ ನೀಡಬೇಕೆಂದು ಸಲಹೆ ನೀಡಿದರು.
ಮಲ್ಲಿಕಾಜರ್ುನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶೈಲೇಂದ್ರ ಪಾಟೀಲ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಸಂತ ಹೊಸಮನಿ, ಶ್ರೀ.ಕ್ಷೇ.ಧ.ಗ್ರಾ.ಯೋ.ತಾಲೂಕಾ ಯೋಜನಾಧಿಕಾರಿ ಪುರಂದರ ಪೂಜಾರಿ, ಜಯದೀಪ ದೇಸಾಯಿ, ಕರವೇ ತಾಲೂಕಾಧ್ಯಕ್ಷ ಅಶೋಕ ಅಂಗಡಿ, ಪರಶುರಾಮ ಪವಾರ, ಸಂಗಣ್ಣಾ ದತ್ತವಾಡೆ, ಸುವಣರ್ಾ ಕುಲಗುಡೆ, ಸುರೇಖಾ ಪಾಟೀಲ ಸೇರಿದಂತೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.
ವಿದ್ಯಾ ಪೂಜೇರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಮಂಗಲಾ ನಿರೂಪಿಸಿ. ವಂದಿಸಿದರು.