ಧಾರವಾಡ -ಹುಬ್ಬಳ್ಳಿ. ಉದ್ಯೋಗಾಕಾಂಕ್ಷಿಗಳ ಪ್ರತಿಭಟನಾ ಧರಣಿಗೆ ಎಸ್‌ಎಫ್‌ಐ-ಡಿವೈಎಫ್‌ಐ ಬೆಂಬಲ
Dharwad-Hubli. SFI-DYFI support the protest sit-in of job seekers
ಧಾರವಾಡ 07: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ವಯೋಮಿತಿ ಸಡಿಲ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಡಿಸೆಂಬರ್-10 ರಂದು ನಡೆಯುವ ಪ್ರತಿಭಟನಾ ಧರಣಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಕರ್ನಾಟಕ ರಾಜ್ಯ ಸಮಿತಿಗಳು ಬೆಂಬಲಿಸುತ್ತವೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದರು.ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಹಾಗೂ ನಮ್ಮ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳ ಭರ್ತಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಮೂಗಿಗೆ ತುಪ್ಪ ಸವರುವಂತೆ ಇಲ್ಲೊಂದಿಷ್ಟು, ಅಲ್ಲೊಂದಿಷ್ಟು ನೇಮಕಾತಿಗಳನ್ನು ಮಾಡಿಕೊಳ್ಳುವ ಅಧಿಸೂಚನೆಗಳನ್ನು ಹೊರಡಿಸುತ್ತಿವೆ.
ಉದ್ಯೋಗ ಪಡೆಯಬೇಕೆಂದು ಹಲವಾರು ವರ್ಷಗಳಿಂದ ತಯಾರಿ ನಡೆಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಹೋಲಿಸಿದರೆ ಇದು ಯಾವುದಕ್ಕೂ ಸಾಲುತ್ತಿಲ್ಲ ಎಂದರು.ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಅಸ್ತಿತ್ವದಲ್ಲಿರುವ ಉದ್ಯೋಗಗಳನ್ನು ವ್ಯವಸ್ಥಿತವಾಗಿ ತೆಗೆದುಹಾಕಲು, ಇಲಾಖೆಗಳನ್ನು ವೀಲೀನಗೊಳಿಸುವ ಮೂಲಕ ಹುದ್ದೆಗಳನ್ನು ರದ್ದುಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿವೆ. ಆ ಮೂಲಕ ಯುವಜನರನ್ನು ಅಕ್ಷರಶಃ ಬೀದಿಗೆ ತಳ್ಳಿವೆ ಎಂದರು. ಉದ್ಯೋಗದ ಹಕ್ಕಿಗಾಗಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಎಸ್‌ಎಫ್‌ಐ-ಡಿವೈಎಫ್‌ಐ ಬೆಂಬಲಿಸುತ್ತವೆ ಎಂದು ಹೇಳಿದರು.ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ನೇಮಕಾತಿಯನ್ನು ಕೆಲವೇ ಹುದ್ದೆಗಳಿಗೆ ಸೀಮಿತಗೊಳಿಸದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.
ಪೋಲಿಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿಯನ್ನು ಎಸ್.ಸಿ, ಎಸ್.ಟಿ ಹಾಗೂ ಒಬಿಸಿಗೆ 33 ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಗಳಿಗೆ ಹೆಚ್ಚಿಸಿ ಯಾವುದೇ ನೆಪಗಳನ್ನು ’ ಕೊಡದೇ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ರಾಜ್ಯದಲ್ಲಿ ಕಳೆದ ನಾಲೈದು ವರ್ಷಗಳಿಂದ ಸರಿಯಾದ ನೇಮಕಾತಿಗಳು ನಡೆಯದ ಹಿನ್ನೆಲೆಯಲ್ಲಿ ಎಲ್ಲ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನು 5 ವರ್ಷಗಳಿಗೆ ಸಡಿಲಿಕೆ ಮಾಡಬೇಕು ಎಂದು ಎಸ್‌ಎಫ್‌ಐ ಕರ್ನಾಟಕ ರಾಜ್ಯ ಸಮಿತಿಯ ಪರವಾಗಿ ಬೆಂಬಲ ಸೂಚಿಸಿ ಮಾತನಾಡಿದರು.ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ನಾಗರಾಜ ಛಲವಾದಿ ಮಾತನಾಡಿ, ಒಳ ಮೀಸಲಾತಿ ಗೊಂದಲಗಳನ್ನು ಕೂಡಲೇ ಪರಿಹರಿಸಿ ಅಧಿಸೂಚನೆಗಳನ್ನು ಹೊರಡಿಸಬೇಕು. ಎಲ್ಲಾ ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ಪರೀಕ್ಷಾರ್ಥಿಗಳಿಗೆ ಪದಾ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.
ರಾಜ್ಯದಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಎಲ್ಲಾ ನೇಮಕಾತಿ ಪ್ರಕ್ರಿಯೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಎಲ್ಲಾ ರೀತಿಯ ಈಗ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್, ಜಯನಗರ, ಸಪ್ತಾಪುರ, ಶ್ರೀನಗರ, ಕಲ್ಯಾಣನಗರ, ಜುಬ್ಲಿ ಸರ್ಕಲ್ ಭಾಗದಲ್ಲಿ ವಿದ್ಯಾರ್ಥಿ-ಯುವಜನರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ರಾಜ್ಯ ಸಂಚಾಲಕ ಅರುಣ್ ನಾಗವತ್ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 