ಬಳಗಾನೂರ ಶ್ರೀ ಶಿವಶಾಂತವೀರ ಶರಣರ ಧೀರ್ಘದಂಡ ನಮಸ್ಕಾರ
Dhirghadanda Namaskar from Balaganur Shri Shivshanthaweera Sharan
ಬಳಗಾನೂರ ಶ್ರೀ ಶಿವಶಾಂತವೀರ ಶರಣರ ಧೀರ್ಘದಂಡ ನಮಸ್ಕಾರ
ಕೊಪ್ಪಳ 16: ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರೆಯ ಅಂಗವಾಗಿ ಇಂದು ಸಾಯಂಕಾಲ 05.00 ಗಂಟೆಗೆ ಶ್ರೀ ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರ ಕಾರ್ಯಕ್ರಮವೂ ಒಂದು ವಿಶಿಷ್ಟವಾದುದು. ಇದುಕೂಡಾ ಶ್ರೀಗವಿಮಠದ ಪರಂಪರಾಗತ ಸಂಪ್ರದಾಯ. ಬಳಗಾನೂರಿನ ಪೂಜ್ಯ ಶಿವಶಾಂತವೀರ ಶರಣರು ಶ್ರೀಮಠದ ಮಹಾದ್ವಾರದಿಂದ ಪ್ರಾರಂಭಿಸಿ ಶ್ರೀ ಗವಿಮಠದ ಬೆಟ್ಟದ ಮೇಲಿನ ಶ್ರೀ ಮ.ನಿ.ಪ್ರ.ಜ.ಲಿಂ. ಮರಿಶಾಂತವೀರ ಶಿವಯೋಗಿಗಳ ಗದ್ದುಗೆಯವರಗೆ ಹೂವಿನ ಹಾಸಿಗೆಯ ಮೇಲೆ ಭಕ್ತಿಯ ಭಾವಾವೇಷವಾಗಿ ದೀರ್ಘದಂಡ ನಮಸ್ಕಾರ ಹಾಕಿದರು.
ಶರಣರ ಹಿಂದೆ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತು ಕೊಂಡ ಅಪಾರ ಭಕ್ತ ಸಮೂಹವೇ ದೀರ್ಘದಂಡ ನಮಸ್ಕಾರ ಹಾಕುತ್ತದೆ. ಚಿಕ್ಕೇನಕೊಪ್ಪದ ಲಿಂ. ಚನ್ನವೀರ ಶರಣರುತಮ್ಮ ಗುರುಗಳಾದ ಶ್ರೀ ಮ.ನಿ.ಪ್ರ.ಜ.ಲಿಂ. ಮರಿಶಾಂತವೀರ ಶಿವಯೋಗಿಗಳಿಂದ ಚಿನ್ಮಯಾನುಗ್ರಹ ದೀಕ್ಷೆ ಪಡೆದ ನಂತರ ಅಂದಿನಿಂದ ನಿರಂತರವಾಗಿ ಸುಮಾರು 50 ವರ್ಷಗಳಿಂದ ಶ್ರೀ ಮ.ನಿ.ಪ್ರ.ಜ.ಲಿಂ. ಮರಿಶಾಂತವೀರ ಶಿವಯೋಗಿಗಳ ಗದ್ದುಗೆಯತನಕ ದೀರ್ಘದಂಡ ನಮಸ್ಕಾರ ಹಾಕುವುದರ ಮೂಲಕ ಗುರುಗಳಿಗೆ ಭಕ್ತಿಯ ನಮನಗಳನ್ನು ಅರ್ಿಸುತ್ತಿದ್ದರು.ಅವರ ಲಿಂಗೈಕ್ಯದ ನಂತರ ಇದೀಗ ಬಳಗಾನೂರಿನ ಶ್ರೀ ಶಿವಶಾಂತವೀರ ಶರಣರುತಮ್ಮಗುರು ಪರಂಪರೆಯನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.
ಈ ಕಾರ್ಯಕ್ರಮವನ್ನು ನೋಡಲು ಜಾತ್ರೆಯಷ್ಟೇ ಜನರು ಆಗಮಿಸಿ ಶರಣರ ದರ್ಶನಾಶಿರ್ವಾದ ಪಡೆಯುತ್ತಾರೆ. ಹೊಂಬಳ, ಚಿಕ್ಕೇನಕೊಪ್ಪ, ಸೂಡಿಗ್ರಾಮದ ಸದ್ಭಕ್ತರ ಭಜನಾ ಮಂಡಳಿಯವರ ಭಕ್ತಿಗೀತೆಗಳು, ಜಯಘೋಷಗಳು, ಭಕ್ತಿಭಾವದ ಘೋಷಣೆಗಳು, ಭಕ್ತರೆಲ್ಲರಎದೆಯಲ್ಲಿ ‘ಗವಿಸಿದ್ಧ, ಗವಿಸಿದ್ಧ’ ಎಂಬ ವಾಣಿ ಪ್ರತಿಧ್ವನಿಸಿರುತ್ತಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 