ಡಿಜಿಟಲ್ ಪ್ಯಾನೆಲ್ ಬೋರ್ಡ್ ಉದ್ಘಾಟನೆ
Digital Panel Board inauguration
ಬೆಳಗಾವಿ 12 : ರಾಕಸಕೊಪ್ಪ ಗ್ರಾಮದ ಸರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಪ್ಯಾನೆಲ್ ಬೋರ್ಡ್ ಅನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಉದ್ಘಾಟಿಸಿದರು. ಗ್ರಾಮೀಣ ಕ್ಷೇತ್ರದ ಮಕ್ಕಳು ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಹುದ್ದೆಗಳಿಗೆ ಹೋಗಬೇಕು ಎನ್ನುವುದೇ ನಮ್ಮ ಬಯಕೆ. ಆಧುನಿಕ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ವಿಷಯಗಳನ್ನು ಅತಿ ವೇಗವಾಗಿ ಮತ್ತು ನಿಖರವಾಗಿ ಕಲಿಸಲು ಡಿಜಿಟಲ್ ಬೋರ್ಡ್ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಹಲವು ಶಾಲೆಗಳಲ್ಲಿ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 