ಅಂಗನವಾಡಿ ಕಟ್ಟಡಗಳ ಶಿಥಿಲತೆ: ಮಕ್ಕಳ ಸುರಕ್ಷತೆಗೆ ಆತಂಕ
Dilapidated Anganwadi buildings: Concerns over children's safety
ಶಿರಹಟ್ಟಿ 01: ಅಂಗನವಾಡಿ ಕಟ್ಟಡಗಳಲ್ಲಿ ಬಿರುಕುಗಳು ಕಾಣಿಸಿಕೊಳ್ಳುವುದು ಮತ್ತು ಅವು ಶಿಥಿಲಗೊಳ್ಳುವುದು ಸಾಮಾನ್ಯ ಸಮಸ್ಯೆಯಾಗಿದ್ದು, ಇದಕ್ಕೆ ಅತಿಯಾದ ಮಳೆ ಹಾಗೂ ಹಳೆಯ ಕಟ್ಟಡಗಳೇ ಪ್ರಮುಖ ಕಾರಣಗಳಾಗಿವೆ. ಇದರ ಪರಿಣಾಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಕೂಡಲೇ ಈ ಕಟ್ಟಡಗಳನ್ನು ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಹಾಗೂ ಪಾಲಕರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಶಿರಹಟ್ಟಿ ತಹಶೀಲ್ದಾರ ಕಚೇರಿ ಸಮೀಪದ ವಿಜಯನಗರದಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆಹಿ07 ಸುಮಾರು 10 ವರ್ಷಗಳ ಹಿಂದೆ ನಿರ್ಮಾಣಗೊಂಡ ಕಟ್ಟಡವಾಗಿದೆ. ಈ ಕಟ್ಟಡವು ಅಕ್ಕಪಕ್ಕದ ಮನೆಗಳಿಗೆ ಅಂಟಿಕೊಂಡಿದ್ದು, ಮುಂಭಾಗದಲ್ಲಿ ಸದಾ ಕಿಟಕಿ ಮುಚ್ಚಿರುವ ಇರುವ ಸ್ಥಿತಿಯಲ್ಲಿದೆ. ಕಡಿಮೆ ಗುಣಮಟ್ಟದ ಸಿಮೆಂಟ್ ಬಳಸಿ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಗೋಡೆಗಳು ವರ್ಷಪೂರ್ತಿ ತೇವದಿಂದ ಕೂಡಿವೆ. ಕಟ್ಟಡದ ಒಳಭಾಗದಲ್ಲೂ ತೇವಾಂಶ ಹೆಚ್ಚಿದ್ದು, ನೀರು ಚಿಮ್ಮುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಂಗನವಾಡಿ ಕಟ್ಟಡಗಳ ಕಾಯಕಲ್ಪಕ್ಕಾಗಿ ವರ್ಷಾನುಗಟ್ಟಲೆ ಕಾಯುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ತಾಲ್ಲೂಕು ಪಂಚಾಯತ್ ಇಲಾಖೆಗಳ ನಡುವಿನ ಹೊಂದಾಣಿಕೆಯ ಕೊರತೆಯಿಂದಾಗಿ ಅಂಗನವಾಡಿ ಕೇಂದ್ರಗಳ ದುರಸ್ತಿ ಮತ್ತು ನೂತನ ಕಟ್ಟಡ ನಿರ್ಮಾಣ ಕಾರ್ಯಗಳು ಮುಂದುವರಿಯುತ್ತಿಲ್ಲ ಎನ್ನಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಪಟ್ಟಣದಲ್ಲಿನ ಅಂಗನವಾಡಿ ಕೇಂದ್ರವನ್ನು ನೆಲಸಮ ಮಾಡಿ ನೂತನ ಕಟ್ಟಡ ನಿರ್ಮಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.
ಅತಿಯಾದ ಮಳೆ ಹಾಗೂ ಹಳೆಯ ಕಟ್ಟಡಗಳ ಕಾರಣದಿಂದಾಗಿ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು, ಇದು ಕಟ್ಟಡದ ಸುರಕ್ಷತೆ ಮತ್ತು ವಸತಿ ವ್ಯವಸ್ಥೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಇದಲ್ಲದೆ, ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ಹಾಳಾಗಿದ್ದು, ಹಲವೆಡೆ ಬಿರುಕು ಬಿಟ್ಟಿದೆ. ಯಾವಾಗ ಬೇಕಾದರೂ ಕಾಂಕ್ರೀಟ್ ತುಂಡುಗಳು ಮಕ್ಕಳ ತಲೆಯ ಮೇಲೆ ಬೀಳುವ ಅಪಾಯವಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಕಟ್ಟಡದ ಒಳಗೆ ನೀರು ಹರಿದು ಬರುತ್ತಿದ್ದು, ಮಳೆ ನೀರು ಅಂಗನವಾಡಿಯಲ್ಲಿನ ವಸ್ತುಗಳ ಮೇಲೆ ಸುರಿಯುವುದರಿಂದ ಕೆಲವು ಸಾಮಗ್ರಿಗಳು ಹಾಳಾಗಿವೆ. ಇದರಿಂದ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸಂಬಂಧಿಸಿದ ಇಲಾಖೆಗಳು ತಕ್ಷಣವೇ ಗಮನಹರಿಸಿ ಅಂಗನವಾಡಿ ಕೇಂದ್ರಗಳ ದುರಸ್ತಿ ಅಥವಾ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 