ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಸಹಯೋಗದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಸಹಯೋಗದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ  

ಬೆಳಗಾವಿ 15 : ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಸಹಯೋಗದಲ್ಲಿ ಶುಕ್ರವಾರ ದಿನಾಂಕ 15ನೆ ನವೆಂಬರ 2024 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ  ಕಿಡ್ನಿ ಕಸಿ (ಕಿಡ್ನಿ ಟ್ರಾನ್ಸ್‌ಪ್ಲಾಂಟ್) ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು.. ಕಾರ್ಯಕ್ರಮದಲ್ಲಿ ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಮತ್ತು  ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ರಿತೇಶ ವರ್ಣೆಕರ್ ಭಾಗವಹಿಸಿ ಕಿಡ್ನಿ ಕಸಿ ಕುರಿತು ಜಾಗೃತಿ ಮೂಡಿಸಿದರು.ಮನುಷ್ಯನ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು, ದಿನದ 24 ಗಂಟೆಗಳು ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ ಇವುಗಳ ಕಾರ್ಯ ಚಟುವಟಿಕೆಗಳಲ್ಲಿ ಏನಾದ್ರು ವ್ಯತ್ಯಾಸ ಕಂಡುಬಂದರೆ ಆರೋಗ್ಯಕ್ಕೆ ತುಂಬಾ ತೊಂದರೆಯಾಗುತ್ತದೆ.  

ಮೂತ್ರಪಿಂಡ ಕಸಿ ಯಾವಾಗ ಮಾಡಬೇಕು? ಕಿಡ್ನಿ ದಾನವನ್ನು ಯಾರು ಮಾಡಬಹುದು? ಒಂದುವೇಳೆ ಮಾಡುತ್ತಿದ್ದರೆ ಅದರ ಬಗ್ಗೆ ಹೇಗೆ ಕಾಳಜಿ ವಹಿಸಬೇಕು, ಆಹಾರ ಪದ್ದತಿ ಹೇಗಿರಬೇಕು ಎಂಬುದರ ಕುರಿತು ತಿಳಿಸಿದರು ಮತ್ತು ಕೇಳುಗರ ಕಿಡ್ನಿ ಕಸಿ ಸಂಬಂಧಿಸಿದ ಪ್ರಶ್ನೆಗಳ ಕುರಿತು ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್ ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.