ನದಿ ದಂಡೆಯ ಜನರಿಗೆವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ
Disaster Management Authority issues warning to people living along the river banks
ನದಿ ದಂಡೆಯ ಜನರಿಗೆವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ
ಕಾರವಾರ, 10 : ಶರಾವತಿ ಜಲಾನಯನ ಪ್ರದೇಶದಲ್ಲಿ ಗಣನೀಯವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ, ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನದಿ ದಂಡೆಯ ಜನರು ಜಾಗೃತರಾಗಿರುವಂತೆ ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷೆ ಕೆ.ಲಕ್ಷ್ಮೀಪ್ರಿಯಾ ಎಚ್ಚರಿಕೆ ನೀಡಿದ್ದಾರೆ.ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ರವಿವಾರ ಬೆಳಗ್ಗೆ 08.00 ಘಂಟೆಗೆ ಜಲಾಶಯದ ನೀರಿನ ಮಟ್ಟವು 1812.95 ಅಡಿಗಳಿಗೆ ತಲುಪಿರುತ್ತದೆ. ಜಲಾಶಯ ಶೇ.86 ರಷ್ಟು ತುಂಬಿದೆ. ಹಠಾತ್ ಮಳೆ ಹೆಚ್ಚಾದರೆ ಯಾವುದೇ ಕ್ಷಣ ಜಲಾಶಯ ಭರ್ತಿಯಾಗಿ, ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಶನಿವಾರ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 11,200 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿತ್ತು. ರವಿವಾರ 7700 ಕ್ಯೂಸೆಕ್ಸ ಇದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದೆಂದು ಲಿಂಗನಮಕ್ಕಿ ಜಲಾಶಯದ ಕೆಪಿಸಿಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಜಲಾಶಯದ ತಗ್ಗು ಪ್ರದೇಶದವಾದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ತಳಮಟ್ಟದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸುತ್ತಿದ್ದೇನೆಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹೇಳಿದ್ದಾರೆ.ಸಂಭವನೀಯ ಪ್ರವಾಹ:ಪ್ರವಾಹ ಸಂಭವನೀಯ ಸ್ಥಳಗಳ ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯಲು ಸಿದ್ಧತೆಯಲ್ಲಿರಬೇಕುಶರಾವತಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರಿಗಾಗಿ ಕಾಳಜಿ ಕೇಂದ್ರಗಳನ್ನು ಅಣಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನದಿಯಲ್ಲಿ ಬೋಟಿಂಗ್ ಹಿನ್ನೀರು ಪ್ರವಾಸ ಬೇಡ:ಪ್ರವಾಸಿಗರು ಹಾಗೂ ಸಾರ್ವಜನಿಕರು, ಮೀನುಗಾರರು ನದಿಯಲ್ಲಿ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ಹಿನ್ನೀರು ಪ್ರವಾಸ,ಪೋಟೋ ಶೂಟಿಂಗ್ ಗೆ ತೆರಳದಂತೆ ಕಟ್ಟೆಚ್ಚರವಹಿಸಿ ಎಂದು ಕಂದಾಯ ಇಲಾಖೆಗೆ ಆದೇಶ ನೀಡಿದ್ದಾರೆ.ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ, ಕೊಳ್ಳ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆಯಾದ 08382-229857, ಮೊ. 9483511015 ಕ್ಕೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 