ಅಧಿವೇಶನದಲ್ಲಿ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ : ಸಿಎಂ ಸಿದ್ಧರಾಮಯ್ಯ
ಗದಗ 15 : ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗದಗ ಜಿಲ್ಲೆಯ ರೋಣ ಪಟ್ಟಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆಮಿಷ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು. ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ ಅಃಋ ತನಿಖೆಗೆ ಕೊಡ್ಲಿ ಎಂದರು. ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು.ಈ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ, ಕರ್ನಾಟಕ ಖನಿಜ ಅಭಿವೃಧ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಸೇರಿದಂತೆ ಇತರರು ಹಾಜರಿದ್ದರು.