ಸಾವಿರ ದಿನಗಳ ಸಾರ್ಥಕ ಸೇವೆಯ ಸಮರೆ್ಣ ಸಾಧನಾ ಸಮಾವೇಶದಲ್ಲಿ 1,06,000 ಹಕ್ಕು ಪತ್ರಗಳ ವಿತರಣೆ
Distribution of 1,06,000 rights certificates at the Samarena Sadhana Samavesha for Thousand Days of
ಗದಗ 13: ರಾಜ್ಯ ಸರ್ಕಾರವು ಬಡಜನರ ಹಾಗೂ ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸಾವಿರ ದಿನಗಳ ಸಾರ್ಥಕ ಸೇವೆಯನ್ನು ಜನರಿಗೆ ಸಮರ್ಿಸುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ನಗರದ ಐಬಿಯಲ್ಲಿ ಶುಕ್ರವಾರದಂದು ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಅಸ್ವಿತ್ವಕ್ಕೆ ಬಂದ ನಂತರ ಜನಸಾಮಾನ್ಯರ ಕೆಲಸ ಬಡವರ ಕೆಲಸ, ಜನಸೇವೆಯೇ ಜನಾರ್ಧನ ಸೇವೆ ಎಂದು ತಿಳಿದುಕೊಂಡು ಕಂದಾಯ ಇಲಾಖೆಯ ಅಧಿಕಾರಿಗಳೇ ಮನೆ ಮನೆ ಬಾಗಿಲಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಮನೆಗಳಿಗೆ ಹಕ್ಕು ಪತ್ರ ಇಲ್ಲದೇ ಬದುಕು ಅತಂತ್ರ ದಿಂದ ಕೂಡಿದ ಜನರಿಗೆ ಶಾಶ್ವತ ಪರಿಹಾರ ಕೊಡಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಿದೆ.
6500 ಕಂದಾಯ ಗ್ರಾಮಗಳ ಘೋಷಣೆಯು ಗುರಿಯು ಹೊಂದಿದ್ದು 2,20,000 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಬಡಜನರಿಗೆ ಭೂ ಗ್ಯಾರಂಟಿ ಕೊಡುವ ಕೆಲಸ ಸರ್ಕಾರ ಮಾಡುತ್ತಿದೆ. ನಾಳೆ ಹಾವೇರಿಯಲ್ಲಿ ಜರುಗುವ ಸಾಧನಾ ಸಮಾವೇಶದಲ್ಲಿ 1,06,000 ಹಕ್ಕುಪತ್ರಗಳನ್ನು ಸಮರೆ್ಣ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಇದೊಂದು ವೇದಿಕೆಯಾಗಿದೆ ಎಂದು ಕಂದಾಯ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 