ಬಿಪಿಎಲ್ಗೆ 5 ಕೇಜಿ ಅಕ್ಕಿ ಜತೆ 5 ಕೇಜಿ ಆಹಾರ ಕಿಟ್ ವಿತರಣೆ, ದುರ್ಬಳಕೆ ತಪ್ಪಿಸಲು ಕ್ಯೂಆರ್ ಬಳಕೆ
Distribution of 5 kg food kits along with 5 kg rice to BPL, use of QR to prevent misuse
ಬೆಂಗಳೂರು: ಸರ್ಕಾರದ 5 ಕೆ.ಜಿ. ಹೆಚ್ಚುವರಿ ಅಕ್ಕಿ ಬದಲಿಗೆ ನೀಡಲು ಉದ್ದೇಶಿಸಿರುವ ‘ಇಂದಿರಾ ಆಹಾರ ಕಿಟ್’ಗಳ ಮೇಲೆ ಕಣ್ಗಾವಲಿಡಲು ಮುಂದಾಗಿದ್ದು, ಇದಕ್ಕಾಗಿ ‘ಟ್ರ್ಯಕ್ ಆ್ಯಂಡ್ ಟ್ರೇಸ್’ ಮಾಡುವ ಕ್ಯುಆರ್ ಕೋಡ್ಗಳನ್ನು ಪರಿಚಯಿಸಲು ಉದ್ದೇಶಿಸಿದೆ.
ಸರ್ಕಾರ ನೀಡುವ ಇಂದಿರಾ ಆಹಾರ ಕಿಟ್ಗಳ ಮೇಲೆಯೇ ಕ್ಯುಆರ್ ಸ್ಕ್ಯಾನ್ ಮುದ್ರಿಸಲಾಗುವುದು. ಒಂದು ವೇಳೆ ಆ ಕಿಟ್ಗಳು ಕಾಳಸಂತೆಯಲ್ಲಿ ಮಾರಾಟವಾದರೆ, ಅದು ಯಾವ ನ್ಯಾಯಬೆಲೆ ಅಂಗಡಿ ಮತ್ತು ಫಲಾನುಭವಿಯಿಂದ ಬಂದಿದ್ದು ಎನ್ನುವುದು ಕೂಡ ಗೊತ್ತಾಗಲಿದೆ. ಅಂತಹ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಅದನ್ನು ಅಳವಡಿಸಿಕೊಂಡು ಕಿಟ್ಗಳನ್ನು ವಿತರಿಸುವ ವ್ಯವಸ್ಥೆ ಪರಿಚಯಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸೋಮವಾರ ನಡೆದ ‘ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ’ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೂ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ, ಅದರ ಆಧಾರದ ಮೇಲೆ ಪಡಿತರಚೀಟಿದಾರರಿಗೆ ‘ಇಂದಿರಾ ಫುಡ್ ಕಿಟ್’ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಾಗಿ ಇಂದಿರಾ (ಇಂಟಿಗ್ರೆಟೆಡ್ ನ್ಯೊಟ್ರಿಶಿಯನ್ ಆ್ಯಂಡ್ ಡಯಟರಿ ಇನಿಶಿಯೇಟಿವ್ ಫಾರ್ ರಿವಿಟಲೈಸಿಂಗ್ ಅನ್ನಭಾಗ್ಯ ಬೆನಿಫಿಶರೀಸ್) ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ 5 ಕೆ.ಜಿ. ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು 466 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆಟ್ರಿಕ್ ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಠ ಪ್ರಮಾಣದಲ್ಲಿ ನೀಡಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.
ಕೇಂದ್ರ ಸರಬರಾಜು ಸಂಸ್ಥೆಗಳಾದ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್), ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ (ಎನ್ ಸಿಸಿಎಫ್) ಮೂಲಕ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ಅನ್ವಯ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ಗುಣಮಟ್ಟದಲ್ಲಿ ರಾಜಿಯಾಗದೆ, ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಸಬೇಕು. ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದರು.
ಸರಬರಾಜಾದ ಫುಡ್ ಕಿಟ್ಗಳನ್ನು ನಿಗಮದ ಗೋದಾಮು, ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅನ್ನಭಾಗ್ಯದ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ವಿತರಿಸಲಿರುವ ‘ಇಂದಿರಾ ಆಹಾರ ಕಿಟ್’ಗಳ ಮೇಲೆ ಕಣ್ಗಾವಲಿಡಲು ಸರ್ಕಾರವು ಕ್ಯುಆರ್ ಕೋಡ್ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಕ್ಯುಆರ್ ಕೋಡ್ಗಳು ಪ್ರತಿ ಕಿಟ್ ಅನ್ನು ‘ಟ್ರ್ಯಕ್ ಆ್ಯಂಡ್ ಟ್ರೇಸ್’ ಮಾಡಲು ಸಹಾಯ ಮಾಡುತ್ತವೆ. ಒಂದು ವೇಳೆ ಈ ಕಿಟ್ಗಳು ಕಾಳಸಂತೆಯಲ್ಲಿ ಮಾರಾಟವಾದರೆ, ಅದು ಯಾವ ನ್ಯಾಯಬೆಲೆ ಅಂಗಡಿಯಿಂದ ಮತ್ತು ಯಾವ ಫಲಾನುಭವಿಯಿಂದ ಬಂದಿದ್ದು ಎನ್ನುವುದು ತಕ್ಷಣ ಗೊತ್ತಾಗಲಿದೆ. ಈ ಮೂಲಕ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ದುರುಪಯೋಗಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ.
ಯಾಕೆ ಕ್ಯುಆರ್ ಕೋಡ್ ವ್ಯವಸ್ಥೆ?
- ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೇಜಿ ಬೇಳೆ, ಕಾಳು ವಿತರಣೆ
- ಹೀಗೆ ವಿತರಿಸಲಾದ ಬೇಳೆ, ಕಾಳುಗಳು ಕಾಳ ಸಂತೆಯಲ್ಲಿ ಮಾರಾಟ ಸಾಧ್ಯತೆ
- ಇದನ್ನು ತಪ್ಪಿಸಲು ಕ್ಯುಆರ್ ಕೋಡ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಕೆ
- ಕ್ಯುಆರ್ ಕೋಡ್ ಸ್ಕ್ಯಾನಿಂಗ್ ಮಾಡಿದಾಗ ನ್ಯಾಯಬೆಲೆ ಬೆಲೆ, ಪಡೆದುಕೊಂಡ ಫಲಾನುಭವಿ ಸೇರಿ ಎಲ್ಲ ಮಾಹಿತಿ ಸಿಗಲಿದೆ
- ಈ ತಂತ್ರಜ್ಞಾನದಿಂದ ಆಹಾರ್ ಕಿಟ್ ದುರುಪಯೋಗವಾಗುವುದನ್ನು ತಪ್ಪಿಸಬಹುದಾಗಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 