ಇಂದಿನಿಂದ ಎಸ್.ಐ.ಆರ್ ನೋಂದಣಿ ಫಾರ್ಮ್ ವಿತರಣೆ
Distribution of SIR registration forms starts today
ವಿಜಯನಗರ ಹೊಸಪೇಟೆ 04: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಗಣತಿ ನಮೂನೆ (ಎನ್ಯಾಮುರೇಷನ್ ಫಾರ್ಮ್) ವಿತರಣೆ ಕಾರ್ಯ ಜುಲೈ 5 ರೊಳಗೆ ಶೇಕಡಾ 100 ರಷ್ಟು ಪೂರ್ಣಗೊಳಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾಽಽ ಕೆ.ಜಿ. ಜಗದೀಶ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸಾರ್ವಜನಿಕರು, ಉದ್ಯಮಿದಾರರು ಸಿಗದಿದ್ದಲ್ಲಿ ಬಿ.ಎಲ್.ಓಗಳು ಯಾವುದೇ ರೀತಿಯ ಉದಾಸೀನತೆ ತೋರಬಾರದು. ಇಂತಹ ಬೇಜವಾಬ್ದಾರಿತನದಿಂದಾಗಿ ಮತದಾರರ ಪಟ್ಟಿಯಲ್ಲಿ ಹೆಸರುಗಳು ಬಿಟ್ಟು ಹೋಗುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಹಲವು ತಾಂತ್ರಿಕ ಹಾಗೂ ಕಾನೂನಾತ್ಮಕ ತೊಡಕುಗಳು ಎದುರಿಸಬೇಕಾಗುತ್ತದೆ.
ಆದ್ದರಿಂದ ಹಿರಿಯ ಅಧಿಕಾರಿಗಳು ಈ ಕುರಿತು ಬಿ.ಎಲ್.ಓಗಳಿಗೆ ಪ್ರತಿದಿನ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುತ್ತಾ ಕಾರ್ಯದ ಪ್ರಗತಿಯನ್ನು ಪರೀಶೀಲಿಸಬೇಕು. ಬಿ.ಎಲ್.ಓಗಳು ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿದಾಗ ನಿಖರ ಹಾಗೂ ಸ್ಪಷ್ಟ ಮಾಹಿತಿಯನ್ನೇ ದಾಖಲಿಸಬೇಕು. ಪೂರ್ಣ ಆಸಕ್ತಿಯಿಂದ ಕೆಲಸ ಮಾಡಿದರೆ ಶೇ. 99ರಷ್ಟು ಗುರಿ ಸಾಧಿಸಬಹುದು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವ ನಾಗರಿಕರ ಬಗ್ಗೆ ವಿಶೇಷ ಗಮನ ಹರಿಸಿ, ಮಾಹಿತಿ ಕಲೆಹಾಕಿ ಎಚ್ಚರಿಕೆಯಿಂದ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ಬಿ.ಎಲ್.ಎಗಳ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳ ನೆರವು ಪಡೆದು ಎಸ್.ಐ.ಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದರು.
ಎಸ್ಐಆರ್ ನೋಂದಣಿ ಪ್ರಕ್ರಿಯೆಯನ್ನು ಯಾವುದೇ ಲೋಪವಾದಂತೆ ಎಚ್ಚರಿಕೆಯಿಂದ ನಿಭಾಯಿಸುವಂತೆ ಬಿಎಲ್ಓಗಳಿಗೆ ಪ್ರತಿದಿನ ಸೂಕ್ತ ನಿರ್ದೇಶನ ನೀಡುವುದರ ಜತೆಗೆ ಪ್ರಗತಿಯನ್ನು ಪರೀಶೀಲಿಸಲಾಗುವುದು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನೋಂದಣಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಶೇ.100 ರಷ್ಟು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಬಿ.ಎಲ್.ಓಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ.ಕಾಳೆ, ತಹಶೀಲ್ದಾರ್ ಶೃತಿ ಎಂ ಮಾಳಪ್ಪ ಗೌಡರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 