ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ಹುಬ್ಬಳ್ಳಿ ಫೆ.10: ಇಂದು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರ ಗೃಹ ಕಚೇರಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಬರುವ 72 ಪೂರ್ವ ವಿಧಾನಸಭಾ ಮತಕ್ಷೇತ್ರದ ಪರಿಶಿಷ್ಟ ಜಾತಿಯ ಬಿ.ಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಂ.ಜಿ.ಎನ್.ವಿ.ವೈ ಯೋಜನೆಯಡಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಾದ ನವೀನ್ ಹುಬ್ಬಳ್ಳಿ, ಕೀರ್ತನ ಕುಂದಗೋಳ, ಚಿತ್ರ ಸೇನಾ ಘೋಡ್ಕೆ ಹಾಗೂ ಪೌರ ಕಾರ್ಮಿಕರ ಮಕ್ಕಳಾದ ತರುಣ್ ಅರವೇಡ, ರಾಹುಲ್ ಬೇವೂರ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಲ್ಯಾಪ್ಟಾಪ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 6ರ ವಲಯ ಸಹಾಯಕ ಆಯುಕ್ತರಾದ ಗೀರೀಶ್ ತಳವಾರ, ಪಾಲಕರು, ಇತರರು ಹಾಜರಿದ್ದರು.