ಲೋಕದರ್ಶನ ವರದಿ
ಕಾರವಾರ 20: ಏ.23 ರಂದು ನಡೆಯಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಸಂಬಂಧ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಜಿಲ್ಲಾಡಳಿತವು ಸಿದ್ಧಗೊಂಡಿದೆ ಎಂದು ಡಾ.ಕೆ.ಹರೀಶಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಿತ್ತೂರು ಖಾನಾಪುರ ಸೇರಿ ಒಟ್ಟು 1,922 ಮತಗಟ್ಟೆಗಳಿವೆ. ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,437 ಮತಗಟ್ಟೆಗಳಿಗೆ ತಲಾ ಓರ್ವ ಅಧ್ಯಕ್ಷಾಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಕಾಧಿಕಾರಿಗಳು ಹಾಗೂ ಇಬ್ಬರು ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಹೊರತು ಶೇಕಡಾ 25ರಷ್ಟು ಹೆಚ್ಚುವರಿ ಸಿಬ್ಬಂದಿಗಳನ್ನು ಕಾಯ್ದಿರಿಸಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಮೂರು ಹಂತದ ಯಾದೃಚ್ಛಕರಣ ಮೂಲಕ ಆಯ್ದುಕೊಳ್ಳಲಾಗುತ್ತಿದೆ. ಅಂತಿಮ ಯಾದೃಚ್ಛಿಕರಣ ನಂತರವೇ ಸಿಬ್ಬಂದಿಗಳಿಗೆ ತಮಗೆ ನಿಗದಿಪಡಿಸಿದ ಮತಗಟ್ಟೆಯ ಮಾಹಿತಿ ದೊರಕುತ್ತದೆ ಎಂದು ತಿಳಿಸಿದರು. 15,52,544 ಮತದಾರರು ಇದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನವನ್ನು ನಿರೀಕ್ಷಿಸಲಾಗಿದೆ ಎಂದರು. ಮತಗಟ್ಟೆಯಲ್ಲಿ ಮತದಾನ ಮಾಡಲು ಹೋಗುವಾಗ ಮತದಾರರು ಮೊಬೈಲ್ ಬಳಸದಂತೆ ಸೂಚಿಸುತ್ತಿದ್ದೇವೆ. ಮತದಾನದ ಮಾಡುವಾಗ ಪೋಟೋ ತೆಗೆಯುವುದು ಸಹ ನಿರ್ಬಂಧಿಸಲಾಗಿದೆ ಎಂದು ಚುನಾವಣಾಧಿಕಾರಿ ವಿವರಿಸಿದರು.
ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 14-ಖಾನಾಪುರ ಮತ್ತು 15-ಕಿತ್ತೂರ ವಿಧಾನಸಭಾ ಕ್ಷೇತ್ರದ ಒಟ್ಟು 485 ಮತಗಟ್ಟೆಗಳಿಗೆ ಅಧಿಕಾರಿ, ಸಿಬ್ಬಂದಿಗಳನ್ನು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ನಿಯೋಜಿಸುತ್ತಾರೆ. ಎಲ್ಲಾ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಮೂರು ಸುತ್ತಿನ ತರಬೇತಿಯನ್ನು ಆಯೋಜಿಸಲು ಉದ್ದೇಶಿಸಿದ್ದು, ಈಗಾಗಲೇ 2 ಸುತ್ತಿನ ತರಬೇತಿ ಮುಕ್ತಾಯಗೊಂಡಿರುತ್ತದೆ. ಪ್ರಸ್ತುತ ವರ್ಷ ಚುನಾವಣಾ ಆಯೋಗದ ನಿದರ್ೇಶನದಂತೆ ಮಹಿಳಾ ಸಿಬ್ಬಂದಿಗಳಿಗೆ ಅವರವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ನಿಯೋಜಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮತಗಟ್ಟೆ ಅಧಿಕಾರಿ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ವಿಧಾನಸಭಾ ಕ್ಷೇತ್ರದಿಂದ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲ್ಲಟಲ್ಲಿ ಅವರ ಸಾಗಾಟಕ್ಕೆ ಕೆಎಸ್ಆರ್ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ತದನಂತರ ನಿಧರ್ಿಷ್ಟ ಪಡಿಸಿದ ಮತಗಟ್ಟೆಗಳಿಗೆ ತೆರಳಲು ಜಿಪಿಎಸ್ ಅಳವಡಿಸಿದ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತದಾನವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನದ ದಿನದಂದು ಎಲ್ಲಾ ರಾಜ್ಯ ಸಕರ್ಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸಕರ್ಾರಿ ಸೌಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅದೇ ರೀತಿ ಖಾಸಗಿ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸಹ ಮತದಾನ ದಿನದಂದು ವೇತನ ಸಹಿತ ರಜೆ ಎಂದು ಘೋಷಿಸಲು ಸಂಬಂಧಿಸಿದವರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ 1951 ಕಲಂ 135ಬಿ ರಡಿಯಲ್ಲಿ ಕಟ್ಟುನಿಟ್ಟಿನ ನಿದರ್ೇಶನ ನೀಡಲಾಗಿದೆ ಎಂದು ಹೇಳಿದರು.
ದಕ್ಷಿಣ ಗೋವಾದಲ್ಲಿ ಸಹ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಇದಕ್ಕೆ ಗೋವಾದ ಅಧಿಕಾರಿಗಳು ಸಹಕಾರ ನೀಡಿದ್ದಾರೆಂದು ಸಿಇಓ ಮೊಹಮ್ಮದ್ ರೋಶನ್ ತಿಳಿಸಿದರು.
3300 ಪೊಲೀಸ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಎಸ್ಪಿ ವಿನಾಯಕ ಪಾಟೀಲ್ ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ದಿಲಿಶ್ ಸಸಿ ಇದ್ದರು.