ಸೋಮೊಟೋ ಪ್ರಕರಣ ದಾಖಲಿಸಿ ಜಿಲ್ಲಾ ಬಿಜೆಪಿ ನಾಯಕರ ಒತ್ತಾಯ
District BJP leaders insist on filing a case against Somoto
ಕೊಪ್ಪಳ 08: ಕೇಂದ್ರ ಸಚಿವರಾದ ವಿ.ಸೋಮಣ್ಣ ನವರ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ನಿಯೋಗವು ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ಡಾ.ರಾಮ್.ಎಲ್.ಅರಸಿದ್ದಿ ಅವರನ್ನು ಭೇಟಿಯಾಗಿ ಒತ್ತಾಯಿಸಿತು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬಸವರಾಜ ಕ್ಯಾವಟರ್ ಅವರು ಮಾತನಾಡಿ, ಕೊಪ್ಪಳ ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿ ರೈಲ್ವೆ ಸೇತುವೆ ಕಾಮಗಾರಿ ಭೂಮಿಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವರಾದ ವಿ.ಸೋಮಣ್ಣ ಅವರು ಎರಡು ದಿನಗಳ ಹಿಂದೆ ಬಂದಾಗ ಅನಗತ್ಯವಾಗಿ ವಿವಾದ ಮಾಡಲಾಗಿದೆ.ಶಿಷ್ಟಾಚಾರ ಉಲ್ಲಂಘನೆಯಾಗದಿದ್ದರೂ ಕೇಂದ್ರ ಸಚಿವರಿಗೆ ಅವಮಾನ ಮಾಡಬೇಕೆಂಬ ಉದ್ದೇಶದಿಂದ ಅವರ ಮೇಲೆ ಹಲ್ಲೆಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಂದಾಗಿದ್ದು ಸರಿಯಲ್ಲ.
ಸಂಸದ- ಶಾಸಕರ ತವರೂರಿನಲ್ಲಿಯೇ ಈ ರೀತಿಯಾಗಿರುವುದು ದುರಂತದ ಸಂಗತಿ ಎಂದರು.ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಈ ಪ್ರಕರಣದಲ್ಲಿ ತ್ವರಿತವಾಗಿ ಸೊಮೋಟೋ ಪ್ರಕರಣ ದಾಖಲು ಮಾಡಿಕೊಂಡು ದೃಷ್ಕೃತ್ಯ ಎಸಗಿದವರ ಮೇಲೆ ಕ್ರಮ ಜರುಗಿಸಬೇಕು.ಕೇಂದ್ರ ಸಚಿವರು, ಜಿಲ್ಲೆಯ ಅಭಿವೃದ್ಧಿ ಸಲುವಾಗಿ ಕಾಮಗಾರಿ ಭೂಮಿ ಪೂಜೆಗೆ ಬಂದಿದ್ದಾಗ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂಉದ್ದೇಶ ಪೂರ್ವಕವಾಗಿ ಹಲ್ಲೆಗೆ ಮುಂದಾಗಿರುವುದು ಸರಿಯಲ್ಲ. ಇಲ್ಲಿಯ ಕಾಂಗ್ರೆಸ್ ನಾಯಕರಿಗೆ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿ ಇಂತಹ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸ್ಗೂರು ಮಾತನಾಡಿ, ಈ ಘಟನೆಯ ಹಿಂದೆ ಷಡ್ಯಂತ್ರವಿದೆ. ಕೇಂದ್ರ ಸಚಿವರಿಗೆ ಜಿಲ್ಲೆಗೆ ಬಂದಾಗ ರಕ್ಷಣೆ ಸಿಗದಿದ್ದರೇ ಹೇಗೆ..?ಈ ವಿಚಾರದಲ್ಲಿ ಪೊಲೀಸ್ ಇಲಾಖೆ, ಸರಿಯಾದ ನ್ಯಾಯ ಒದಗಿಸಬೇಕು.ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಅಪ್ಪಣ್ಣ ಪದಕಿ, ಎಸ್.ಆರ್.ಭೂಸನೂರಮಠ, ಪೀರಾ ಹುಸೇನ ಹೊಸಳ್ಳಿ, ರಾಘವೇಂದ್ರ ಪಾನಗಂಟಿ,ಈಶಪ್ಪ ಮಾದಿನೂರ, ರಾಜು ಬಾಕಳೆ, ಸುನಿಲ ಹೆಸರೂರ, ಉಮೇಶ,ರಮೇಶ ನಾಡಗೇರಾ,ರಾಜು ವಸ್ತ್ರದ. ಸೇರಿದಂತೆ ಇತರರು ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 