ಖಾದಿ ಉಡುಪು ಖರೀದಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಚಾಲನೆ
District Collector Lakshmi Priya launches Khadi clothing purchase drive
ಕಾರವಾರ 07 : ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಶನಿವಾರ ತಾತ್ಕಾಲಿಕವಾಗಿ ಹಾಕಲಾದ ಖಾದಿ ಬಟ್ಟೆ ಮಳಿಗೆಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಭೇಟಿ ನೀಡಿ ಖಾದಿ ಬಟ್ಟೆ ಖರೀದೀಸಿದರು. ಹಾಗೂ ಸಾಂಕೇತಿಕವಾಗಿ ಸರಕಾರಿ ನೌಕರರಿಗೆ ಖಾದಿ ಉಡುಪನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳಾ ನೌಕರರು ಹಾಗೂ ನೌಕರರ ಸಂಘದ ಅಧ್ಯಕ್ಷರಿಗೆ ಖಾದಿ ಬಟ್ಟೆಗಳನ್ನು ನೀಡಿ, ಪ್ರತಿ ಶನಿವಾರ ಖಾದಿ ಬಟ್ಟೆಗಳನ್ನು ಸ್ವಯಂ ಪ್ರೇರಣೆಯಿಂದ ಧರಿಸಲು ಸಲಹೆ ನೀಡಿದರು. ಖಾದಿ ನಮ್ಮ ಸ್ವದೇಶಿ ಸಂಕೇತ ಹಾಗೂ ಆರೋಗ್ಯಕ್ಕೆ ಉತ್ತಮ ಬಟ್ಟೆ. ಬಿಸಿಲು ಹೆಚ್ಚಿರುವಾಗ ಖಾದಿ ಧರಿಸುವುದು ಉತ್ತಮ ಎಂದರು. ಖಾದಿ ಸ್ವಾಭಿಮಾನದ ಸಂಕೇತವಾಗಿದೆ. ದೇಶಿಯ ನೇಕರಾರರನ್ನು , ಜವಳಿ ಉದ್ಯಮವನ್ನು ಇದು ಪ್ರೋತ್ಸಾಹಿಸುತ್ತದೆ ಎಂದರು.
ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ, ಹುಬ್ಬಳ್ಳಿ ಯ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ತಾತ್ಕಾಲಿಕವಾಗಿ ಖಾದಿ ಬಟ್ಟೆಗಳ ಮಾರಾಟ ಮಳಿಗೆಯನ್ನು ತೆರೆಯಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ನೌಕರರು ಅತ್ಯಂತ ಉತ್ಸಾಹದಿಂದ ಖಾದಿ ಉಡುಪುಗಳನ್ನು ಖರೀದಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈಚೆಗೆ ಸುತ್ತೋಲೆ ಹೊರಡಿಸಿ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಸಂಸ್ಥೆಗಳ ನೌಕರರು, ನಿಗಮ,ಮಂಡಳಿ, ಸ್ವಾಯತ್ತ ಸಂಸ್ಥೆಗಳು , ಕಾಲೇಜು ನೌಕರರು "ಸ್ವಯಂ ಪ್ರೇರಣೆಯಿಂದ" ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಆದೇಶಿಸಿದ್ದು ಇಲ್ಲಿ ಸ್ಮರಣೀಯ. ಖಾದಿ ಬಟ್ಟೆ ಖರೀದಿಗೆ ಸಾಂಕೇತಿಕ ಚಾಲನೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ , ಜಿಲ್ಲಾಧಿಕಾರಿ ಕಚೇರಿ,ಜಿಲ್ಲಾ ಪಂಚಾಯತ, ತಹಶಿಲ್ದಾರ ಕಚೇರಿಯ ಮಹಿಳಾ ನೌಕರರು, ಸಿಬ್ಬಂದಿ ,ಮತ್ತಿತರರು ಇದ್ದರು....
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 