ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
District Collector instructs to celebrate Kalyana Karnataka Utsav in a proper manner
ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
ಕೊಪ್ಪಳ 04 : ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧ್ವಜಾರೋಹಣವಾದ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಈ ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಬೇಕೆಂದು ಹೇಳಿದರು.ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹೇಳಿದರು.ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಹೇಮಂತಕುಮಾರ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟಿಲ್, ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೇಂಕಟೇಶ ನಾಗನೂರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 