35ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಸಹಕಾರ: ಜಿಲ್ಲಾಧಿಕಾರಿ ಸುನೀಲಕುಮಾರ

ಕೊಪ್ಪಳ 20: ಬರುವ ಸಪ್ಟಂಬರ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಹೇಳಿದರು. 

ಅವರು (ಜುಲೈ.20) ಕರ್ನಾಟಕ  ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಹಾಗೂ ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಈ ಬಾರಿ ಕೊಪ್ಪಳ ಜಿಲ್ಲೆಯಲ್ಲಿ ಆಚರಿಸಲು ನಿರ್ಧರಿಸಿದ್ದು, ಇದು ಜಿಲ್ಲೆಗೆ ಜವಾಬ್ದಾರಿಯಾಗಿದೆ.  ಈ ಸಮ್ಮೆಥಳನವನ್ನು ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಹಕರಿಸಲಿದೆ.  ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹಾಗೂ ಅಪೌಷ್ಠಿಕತೆ ವರದಿಗಳು ತುಂಬಾ ಹೆಚ್ಚಿವೆ.  ಆದ್ದರಿಂದ ಬಾಲ್ಯ ವಿವಾಹ ಪದ್ಧತಿಯನ್ನು ಹೋಗಲಾಡಿಸಲು ಮತ್ತು ಅಪೌಷ್ಠಿಕತೆಯನ್ನು ನಿವಾರಿಸಲು ತಾವೆಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿ.  ಬಾಲ್ಯ ವಿವಾಹ ತಡೆಗೆ ಹಾಗೂ ಅಪೌಷ್ಠಿಕತೆ ನಿವಾರಿಸಲು ಜನರಿಗೆ ಅಗತ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದ್ದು, ಸಮ್ಮೆಥಳನದಲ್ಲಿ ಈ ಕುರಿತು ಗೋಷ್ಠಿಗಳನ್ನು ಆಯೋಜಿಸಿ.  ಸಮ್ಮೆಥಳನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಿ ಸಮ್ಮೇಳನದವನ್ನು ಯಶಸ್ವಿಗೊಳಿಸಿ ಎಂದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರುರವರು ಮಾತನಾಡಿ, 35ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲು ಕೆಯುಡಬ್ಲ್ಯುಜೆ ತೀರ್ಮಾನ ನಿಸಿದೆ.  ಸಮ್ಮೇಳನದ ಉದ್ಘಾಟನೆಯು ಮುಖ್ಯ ಮಂತ್ರಿಗಳಿಂದ ನಡೆಯಲಿದೆ. ರಾಜ್ಯ ವಿವಿಧ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಅನೇಕ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.  ವಿವಿಧ ಜಿಲ್ಲೆ, ದೇಶದ ವಿವಿಧ ರಾಜ್ಯಗಳಿಂದ ಮತ್ತು ವಿದೇಶದಿಂದ ಪತ್ರಕರ್ತರು ಹಾಗೂ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  ಜಿಲ್ಲಾಧಿಕಾರಿಗಳು ತಿಳಿಸಿದ ಹಾಗೆಯೇ ಸಮ್ಮೆಥಳನದಲ್ಲಿ ಬಾಲ್ಯ ವಿವಾಹ ತಡೆಗೆ ಹಾಗೂ ಅಪೌಷ್ಠಿಕತೆ ನಿವಾರಿಸಲು ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.  ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದ್ದು, ಯಾವುದೇ ನೂನ್ಯತೆಗಳು ಆಗದಂತೆ ಎಲ್ಲರು ಒಟ್ಟುಗೂಡಿ ಈ ಸಮ್ಮೇಳನವನ್ನು ಯಶಸ್ವಿಗೋಳಿಸೋಣ ಎಂದರು.   

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘನಂದನ್ಮೂತರ್ಿ, ಜಿಲ್ಲಾ ವಾರ್ತಾಧಿಕಾರಿ ಧನಂಜಯ ರಾಜ್ಯ ಉಪಾಧ್ಯಕ್ಷರಾದ ಮತ್ತಿಕೆರೆ ಜಯರಾಮ್ ಹಾಗೂ ಪುಂಡಲೀಕ ಬಾಳೋಜಿ, ರಾಜ್ಯ ಪ್ರಧಾನ ಕಾರ್ಯದಶರ್ಿ ಜಿ.ಸಿ. ಲೋಕೇಶ, ರಾಜ್ಯ ಕಾರ್ಯದರ್ಶಿ ಗಳಾದ ಸಂಜೀವರಾವ್ ಕುಲಕರ್ಣಿ ಹಾಗೂ ಬಂಗ್ಲೆ ಮಲ್ಲಿಕಾರ್ಜುನ  ಖಚಾಂಚಿ ಡಾ. ಕೆ.ಉಮೇಶ್ವರ, ದೆಹಲಿ ಸದಸ್ಯ ವಿ.ಆರ್. ತಾಳಿಕೋಟಿ, ಜಿಲ್ಲಾಧ್ಯಕ್ಷ ಎಂ ಸಾದಿಕ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಎನ್.ಎಂ ದೊಡ್ಡಮನಿ, ರಾಜ್ಯ ಕಾರ್ಯಕಾರಣಿ ಸದಸ್ಯ ಜಿ.ಎಸ್. ಗೋನಾಳ, ರಾಜ್ಯ ನಾಮಕರಣ ಸದಸ್ಯ ಹರೀಶ ಹೆಚ್.ಎಸ್., ಸಮ್ಮೇಳನದ ಕಾರ್ಯನಿರ್ವಹಣಾ ಉಪಸಮಿತಿ ಅಧ್ಯಕ್ಷ ಸಿರಾಜ್ ಬಿಸರಳ್ಳಿ, ಪತ್ರಿಕಾ ಭವನ ನಿರ್ಮಾಣ ಉಪಸಮಿತಿ ಅಧ್ಯಕ್ಷ ಸಿದ್ದನಗೌಡ ಪಾಟೀಲ ಸೇರಿದಂತೆ ಕೊಪ್ಪಳ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಣಿ ಸದಸ್ಯರು, ಗಂಗಾವತಿ, ಯಲಬುಗರ್ಾ, ಕುಷ್ಟಗಿ, ಕನಕಗಿರಿ, ಕಾರಟಗಿ ಹಾಗೂ ಕುಕನೂರ ತಾಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದಶರ್ಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.