ಜ.9 ಮತ್ತು 10 ರಂದು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ
District Government Employees Sports Meet on January 9th and 10th
ಹಾವೇರಿ 31: ಕ್ರೀಡೆಯಲ್ಲಿ ಸೋಲು- ಗೆಲವು ಮುಖ್ಯವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಅತೀ ಮುಖ್ಯ. ಹೀಗಾಗಿ ಜಿಲ್ಲೆಯ ಎಲ್ಲ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾ ಹಿರಿಮೆಯನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಡಾ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2025-26 ನೇ ಸಾಲಿನ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ 1800 ನೌಕರರು ವಿವಿಧ 40 ಕ್ರೀಡೆಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕ್ರೀಡೆಗಳನ್ನು ಅಚ್ಚುಕಟ್ಟಾಗಿ ನಿಯೋಜಿಸಿ ಯಾವುದೇ ಗೊಂದಲಗಳಿಗೆ ಒಳಗಾಗದೆ ಅನಾವಶ್ಯಕ ಖರ್ಚು ವೆಚ್ಚಗಳನ್ನು ಮಾಡದೇ ಅಗತ್ಯಕ್ಕೆ ಅನುಗುಣವಾಗಿ ಅನುದಾನ ಬಳಿಸಿಕೊಂಡು ಕ್ರೀಡಾಕೂಟ ಆಯೋಜಿಸಿ ಎಂದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಜನವರಿ 9 ರಂದು ಓಓಡಿ ರಜೆ ಮಂಜೂರುಮಾಡಿ ಅನುಕೂಲ ಮಾಡಿಕೊಡುವುದಾಗಿ ಸೂಚಿಸಿದರು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಟಿ ಶರ್ಟ್ ಮತ್ತು ಕುಡಿಯುವ ನೀರು, ಉಟೋಪಚಾರದ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಭಯಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಜಿಲ್ಲಾ ಶಾಖೆ ಹಾವೇರಿ ಅಧ್ಯಕ್ಷರಾದ ಮಲ್ಲೇಶ ಕರಿಗಾರಿ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 